ರಾಜ್ಯದಲ್ಲಿ 1.34%ಗೆ ಇಳಿದ ಪಾಸಿಟಿವಿಟಿ ರೇಟ್; 2,082 ಮಂದಿಗೆ ಸೋಂಕು

ರಾಜ್ಯದಲ್ಲಿ 1.34%ಗೆ ಇಳಿದ ಪಾಸಿಟಿವಿಟಿ ರೇಟ್; 2,082 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 36,119 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,18,536 ಆರ್​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,54,655 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 2,082 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೆ ಸೊಂಕಿಗೊಳಗಾದವರ ಸಂಖ್ಯೆ 28,52,079ಕ್ಕೆ ಏರಿಕೆಯಾಗಿದೆ.

ಇಂದು 7,751 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 27,68,632 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆದಂತಾಗಿದೆ. ಸದ್ಯ ರಾಜ್ಯದಲ್ಲಿ 48,116 ಆ್ಯಕ್ಟಿವ್ ಪ್ರಕರಣಗಳಿವೆ. ಇನ್ನು ಕಳೆದ 24 ಗಂಟೆಗಳಲ್ಲಿ 86 ಮಂದಿ ಸೋಂಕಿನಿಂದ ಗುಣಮುಖರಾಗದೇ ಸಾವನ್ನಪ್ಪಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 35,308 ಮಂದಿ ಕೊರೊನಾಗೆ ಬಲಿಯಾದಂತಾಗಿದೆ.

ಬೆಂಗಳೂರು ನಗರದಲ್ಲಿ ಇಂದು 481 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು 10 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 214, ಹಾಸನ 202, ಮೈಸೂರು 227, ಶಿವಮೊಗ್ಗ 108, ಉಡುಪಿ ಜಿಲ್ಲೆಯಲ್ಲಿ 102 ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ.

The post ರಾಜ್ಯದಲ್ಲಿ 1.34%ಗೆ ಇಳಿದ ಪಾಸಿಟಿವಿಟಿ ರೇಟ್; 2,082 ಮಂದಿಗೆ ಸೋಂಕು appeared first on News First Kannada.

Source: newsfirstlive.com

Source link