ರಾಜ್ಯದಲ್ಲಿ 1,464 ಹೊಸ ಪಾಸಿಟಿವ್ ಕೇಸ್; 2,706 ಮಂದಿ ಡಿಸ್ಚಾರ್ಜ್

ರಾಜ್ಯದಲ್ಲಿ 1,464 ಹೊಸ ಪಾಸಿಟಿವ್ ಕೇಸ್; 2,706 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯಾದ್ಯಂತ ಇಂದು 32,474 ಱಪಿಡ್ ಆ್ಯಂಟಿಜೆನ್ ಟೆಸ್ಟ್, 80,982 ಆರ್​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದತೆ ಒಟ್ಟು 1,13,456 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದ್ದು ಈ ಪೈಕಿ ಕಳೆದ 24 ಗಂಟೆಗಳಲ್ಲಿ 1,464 ಕೊರೊನಾ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ರಾಜ್ಯದಲ್ಲಿ ಸೋಂಕಿಗೊಳಗಾದವರ ಸಂಖ್ಯೆ 28,86,702ಕ್ಕೆ ಏರಿಕೆಯಾಗಿದೆ.

ಇಂದು 2,706 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಈವರೆಗೆ 28,24,197 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಸೋಂಕಿನಿಂದಾಗಿ 29 ಮಂದಿ ಸಾವನ್ನಪ್ಪಿದ್ದು ಈವರೆಗೆ 36,226 ಮಂದಿ ಕೊರೊನಾಗೆ ಬಲಿಯಾದಂತಾಗಿದೆ. ಸದ್ಯ ರಾಜ್ಯದಲ್ಲಿ 26,256 ಆ್ಯಕ್ಟಿವ್ ಕೇಸ್​ಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿಅಂಶಗಳು ಹೇಳುತ್ತಿವೆ.

The post ರಾಜ್ಯದಲ್ಲಿ 1,464 ಹೊಸ ಪಾಸಿಟಿವ್ ಕೇಸ್; 2,706 ಮಂದಿ ಡಿಸ್ಚಾರ್ಜ್ appeared first on News First Kannada.

Source: newsfirstlive.com

Source link