ಬೆಂಗಳೂರು: ರಾಜ್ಯದಲ್ಲಿ ಇಂದು 39,070 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,25,566 ಆರ್​ಟಿಪಿಸಿಆರ್ ಟೆಸ್ಟ್​ಗಳೂ ಸೇರಿದಂತೆ ಒಟ್ಟು 1,64,636 ಕೊರೊನಾ ಪರೀಕ್ಷೆಗಳನ್ನ ನಡೆಸಲಾಗಿದೆ. ಈ ಪೈಕಿ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 3,604 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 28,34,630ಕ್ಕೆ ಏರಿಕೆಯಾಗಿದೆ.

ಇಂದು 7,699 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಈವರೆಗೆ 26,98,822 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆದಂತಾಗಿದೆ. ಇಂದು 89 ಮಂದಿ ಸಾವನ್ನಪ್ಪಿದ್ದು ಈವರೆಗೆ ಒಟ್ಟು 34,743 ಮಂದಿ ಕೊರೊನಾಗೆ ಬಲಿಯಾದಂತಾಗಿದೆ. ಸದ್ಯ ರಾಜ್ಯದಲ್ಲಿ 1,01,042 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿಅಂಶಗಳು ಹೇಳುತ್ತಿವೆ.

ಬೆಂಗಳೂರು ನಗರವೊಂದರಲ್ಲೇ ಇಂದು 788 ಮಂದಿಗೆ ಕೊರೊನಾ ಪಾಸಿಟಿವ್ ಆಗಿದ್ದು 11 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 454, ಹಾಸನ 322, ಮೈಸೂರು ಜಿಲ್ಲೆಯಲ್ಲಿ 478 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

The post ರಾಜ್ಯದಲ್ಲಿ 2.18% ಕೊರೊನಾ ಪಾಸಿಟಿವಿಟಿ.. ಎರಡಂಕಿಗಿಳಿದ ಸೋಂಕಿತರ ಸಾವಿನ ಸಂಖ್ಯೆ appeared first on News First Kannada.

Source: newsfirstlive.com

Source link