ಬೆಂಗಳೂರು: ರಾಜ್ಯದಲ್ಲಿ ಇಂದು 41,721 ಱಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 1,19,566 ಆರ್​ಟಿಪಿಸಿಆರ್ ಟೆಸ್ಟ್​​ಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 3,979 ಮಂದಿಗೆ ಕೊರೊನಾ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. ಈ ಮೂಲಕ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 28,23,444ಕ್ಕೆ ಏರಿಕೆಯಾಗಿದೆ.

ಇಂದು 9,768 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಈವರೆಗೆ ಒಟ್ಟು 26,78,473 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆದಂತಾಗಿದೆ. 138 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದು ಈವರೆಗೆ 34,425 ಮಂದಿ ಕೊರೊನಾಗೆ ಬಲಿಯಾದಂತಾಗಿದೆ. ಸದ್ಯ ರಾಜ್ಯದಲ್ಲಿ 1,10,523 ಆ್ಯಕ್ಟಿವ್ ಕೇಸ್​ಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿ ಅಂಶಗಳು ಹೇಳುತ್ತಿವೆ.

ಬೆಂಗಳೂರಿನಲ್ಲಿ ಇಂದು 969 ಮಂದಿಗೆ ಸೋಕು ತಗುಲಿದ್ದು 14 ಮಂದಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 498, ಹಾಸನದಲ್ಲಿ 336, ಮೈಸೂರಿನಲ್ಲಿ 404, ಶಿವಮೊಗ್ಗ ಜಿಲ್ಲೆಯಲ್ಲಿ 206 ಸೋಂಕು ಪ್ರಕರಣಗಳು ಪತ್ತೆಯಾಗಿವೆ.

The post ರಾಜ್ಯದಲ್ಲಿ 2.46% ಗೆ ಇಳಿದ ಪಾಸಿಟಿವಿಟಿ ರೇಟ್: 3,979 ಜನರಿಗೆ ಸೋಂಕು ದೃಢ appeared first on News First Kannada.

Source: newsfirstlive.com

Source link