ಬೆಂಗಳೂರು: ರಾಜ್ಯದಲ್ಲಿ ಇಂದು 43,869 ಕೊರೊನಾ ಟೆಸ್ಟ್ ಹಾಗೂ 1,30,652 ಆರ್​ಟಿಪಿಸಿಆರ್​ ಟೆಸ್ಟ್​ಗಳೂ ಸೇರಿದಂತೆ ಇಂದು ಒಟ್ಟಾರೆ 1,74,521 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 4,517 ಪಾಸಿಟಿವ್ ಕೇಸ್​ಗಳು ಪತ್ತೆಯಾಗಿವೆ. ಈ ಮೂಲಕ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 28,06,453ಕ್ಕೆ ಏರಿಕೆಯಾಗಿದೆ.

ಇಂದು ರಾಜ್ಯದಾದ್ಯಂತ 8,456 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು ಈವರೆಗೆ ಒಟ್ಟು 26,45,735 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆದಂತಾಗಿದೆ. 120 ಮಂದಿ ಇಂದು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಇನ್ನು ಈವರೆಗೆ ಸೋಂಕಿನಿಂದ 33,883 ಮಂದಿ ಕೊರೊನಾಗೆ ಬಲಿಯಾದಂತಾಗಿದೆ. ಸದ್ಯ ರಾಜ್ಯದಲ್ಲಿ 1,26,813 ಆ್ಯಕ್ಟಿವ್ ಕೇಸ್​ಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿಅಂಶಗಳು ಹೇಳುತ್ತಿವೆ.

ಬೆಂಗಳೂರು ನಗರವೊಂದರಲ್ಲೇ ಇಂದು 933 ಪಾಸಿಟಿವ್ ಕೇಸ್​ಗಳು ಪತ್ತೆಯಾಗಿದ್ದು 12 ಮಂದಿ ಸಾವನ್ನಪ್ಪಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 545 ಪಾಸಿಟಿವ್ ಕೇಸ್​ಗಳು ಪತ್ತೆಯಾಗಿದ್ದು 17 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲಿ 346, ಬೆಳಗಾವಿಯಲ್ಲಿ 201, ಚಿಕ್ಕಮಗಳೂರಿನಲ್ಲಿ 183, ಉಡುಪಿಯಲ್ಲಿ 167, ತುಮಕೂರಿನಲ್ಲಿ 144 ಮಂದಿ ಸೋಂಕಿಗೊಳಗಾಗಿದ್ದಾರೆ.

The post ರಾಜ್ಯದಲ್ಲಿ 2.58ಕ್ಕೆ ಇಳಿದ ಪಾಸಿಟಿವಿಟಿ ರೇಟ್.. ಇಂದು 4,517 ಕೊರೊನಾ ಕೇಸ್ appeared first on News First Kannada.

Source: newsfirstlive.com

Source link