ಬೆಂಗಳೂರು: ರಾಜ್ಯದಲ್ಲಿ ಇಂದು 42,925 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಹಾಗೂ 99,573 ಆರ್​ಟಿಪಿಸಿಆರ್​ ಟೆಸ್ಟ್​ಗಳು ಸೇರಿದಂತೆ ಒಟ್ಟು 142498 ಕೊರೊನಾ ಪರೀಕ್ಷೆಗಳನ್ನು ನಡೆಸಲಾಗಿದೆ. ಈ ಪೈಕಿ ಇಂದು 5783 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 27,96,121ಕ್ಕೆ ಏರಿಕೆಯಾಗಿದೆ.

ಇಂದು 15,290 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ, ಈವರೆಗೆ 26,25,447 ಮಂದಿ ಗುಣಮುಖರಾದಂತಾಗಿದೆ. ಇಂದು 168 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು ಈವರೆಗೆ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 33602ಕ್ಕೆ ಏರಿಕೆಯಾಗಿದೆ. ಸದ್ಯ ರಾಜ್ಯದಲ್ಲಿ 1,37,050 ಆ್ಯಕ್ಟಿವ್ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳು ಹೇಳುತ್ತಿವೆ.

ಇನ್ನು ಬೆಂಗಳೂರು ಒಂದರಲ್ಲೇ 1100 ಹೊಸ ಪ್ರಕರಣಗಳು ದಾಖಲಾಗಿ, 39 ಮಂದಿ ಪ್ರಾಣವನ್ನ ಕಳೆದುಕೊಂಡಿದ್ದಾರೆ. ಇನ್ನು ಬಳ್ಳಾರಿ 155, ಬೆಳಗಾವಿ 139, ಚಿಕ್ಕಮಗಳೂರು 278, ದಕ್ಷಿಣ ಕನ್ನಡ 1006, ದಾವಣಗೆರೆ 174, ಹಾಸನ 390, ಮಂಡ್ಯ 249, ಮೈಸೂರು 551, ಶಿವಮೊಗ್ಗ 199, ತುಮಕೂರು 153, ಉಡುಪಿ 188 ಹಾಗೂ ಉತ್ತರ ಕನ್ನಡದಲ್ಲಿ 132 ಪ್ರಕರಣಗಳು ದಾಖಲಾಗಿವೆ. ಇನ್ನು ಬಾಗಲಕೋಟೆಯಲ್ಲಿ ರಾಜ್ಯದಲ್ಲಿಯೇ ಅತೀ ಕಡಿಮೆ ಅಂದ್ರೆ 7 ಕೊರೊನಾ ಪ್ರಕರಣ ದಾಖಲಾಗಿದೆ. ಇನ್ನು ರಾಜ್ಯದಲ್ಲಿ ಪಾಸಿಟಿವಿಟಿ ರೇಟ್​ 4.05%ಕ್ಕೆ ಬಂದು ನಿಂತಿದೆ. ಮೃತಪಟ್ಟವರ ಶೇಕಡವಾರು ಪ್ರಮಾಣ ಶೇಕಡಾ 2.90ಕ್ಕೆ ನಿಂತಿದೆ.

The post ರಾಜ್ಯದಲ್ಲಿ 5,783 ಮಂದಿಗೆ ಕೊರೊನಾ; 168 ಸೋಂಕಿತರು ಸಾವು appeared first on News First Kannada.

Source: newsfirstlive.com

Source link