ರಾಜ್ಯದಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ, ತೆರವಾಗಿರುವ ಸ್ಥಾನಗಳಿಗೂ ಚುನಾವಣೆ | Elections to 58 local bodies in karnataka announced december 27 voting date


ರಾಜ್ಯದಲ್ಲಿ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ, ತೆರವಾಗಿರುವ ಸ್ಥಾನಗಳಿಗೂ ಚುನಾವಣೆ

ಸಾಂದರ್ಭಿಕ ಚಿತ್ರ

ಬೆಂಗಳೂರು: 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ (karnataka local body elections) ಘೋಷಣೆ ಮಾಡಲಾಗಿದೆ. 4 ನಗರಸಭೆ, 19 ಪುರಸಭೆ, 35 ಪ.ಪಂ.ಗೆ ಡಿ. 27ರಂದು ಮತದಾನ ನಡೆಯಲಿದೆ. ಡಿಸೆಂಬರ್ 30ರಂದು ಫಲಿತಾಂಶ ಹೊರಬೀಳಲಿದೆ. ಡಿಸೆಂಬರ್ 27ರಂದು ಚಿಕ್ಕಮಗಳೂರು, ಶಿರಾ, ಗದಗ-ಬೆಟಗೇರಿ, ಹೊಸಪೇಟೆ-ಹೆಬ್ಬಗೋಡಿ ನಗರಸಭೆಗಳಿಗೆ ಮತದಾನ ನಡೆಯಲಿದೆ. 5 ನಗರಸಭೆ, 3 ಪುರಸಭೆ, 1 ಪಟ್ಟಣ ಪಂಚಾಯಿತಿಯಲ್ಲಿ ತೆರವಾಗಿರುವ ಸ್ಥಾನಗಳಿಗೂ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ.

ಡಿಸೆಂಬರ್ 27ರಂದು ಅಥಣಿ, ಅಣ್ಣಿಗೇರಿ, ಬಂಕಾಪುರ, ಜಿಗಣಿ, ಚಂದಾಪುರ, ಬಿಡದಿ, ಮಲೆಬೆನ್ನೂರು, ಕಾಪು, ಹಾರೋಗೇರಿ, ಮುಗಳಖೋಡ, ಮುನವಳ್ಳಿ, ಉಗಾರಖುರ್ದ, ಕಾರಟಗಿ, ಕುರೆಕುಪ್ಪ, ಕುರುಗೋಡು, ಹಗರಿಬೊಮ್ಮನಹಳ್ಳಿ, ಮಸ್ಕಿ, ಕೆಂಭಾವಿ, ಕಕ್ಕೇರಾ ಪುರಸಭೆಗಳಿಗೆ ಮತದಾನ ನಡೆಯಲಿದೆ. ಡಿ. 27ರಂದು 35 ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಅವು ನಾಯಕನಹಟ್ಟಿ, ವಿಟ್ಲ, ಕೋಟೆಕಾರು, ಎಂ.ಕೆ.ಹುಬ್ಬಳ್ಳಿ, ಕಂಕನವಾಡಿ, ನಾಗನೂರ, ಯಕ್ಸಾಂಬಾ, ಕಿತ್ತೂರು, ಅರಭಾವಿ, ಐನಾಪುರ, ಶೇಡಬಾಳ, ಚಿಂಚಿಲಿ, ಬೋರಗಾಂವ್, ಕಲ್ಲೋಳಿ, ನಲತವಾಡ, ನಿಡಗುಂದಿ, ದೇವರಹಿಪ್ಪರಗಿ, ಅಲಮೇಲ, ಮನಗೂಳಿ, ಕೊಲ್ಹಾರ, ಕಮತಗಿ, ಬೆಳಗಲಿ, ಅಮೀನಗಡ, ಗುತ್ತಲ, ಜಾಲಿ, ತಾವರಗೇರಾ, ಕುಕನೂರ, ಭಾಗ್ಯನಗರ, ಕನಕಗಿರಿ, ಮರಿಯಮ್ಮನಹಳ್ಳಿ, ಕವಿತಾಳ, ತುರವಿಹಾಳ, ಬಳಗಾನೂರು, ಸಿರವಾರ ಪಟ್ಟಣ ಪಂಚಾಯಿತಿಗೆ ಮತದಾನ ನಡೆಯಲಿದೆ.

TV9 Kannada


Leave a Reply

Your email address will not be published. Required fields are marked *