ಬೆಂಗಳೂರು: ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ದೇಶದ ಅನೇಕ ರಾಜ್ಯಗಳಲ್ಲಿ 12ನೇ ತರಗತಿಯ ಪರೀಕ್ಷೆಯನ್ನ ರದ್ದುಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲೂ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನ  ಈ ವರ್ಷ ನಡೆಸುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷ ಕೊರೊನಾ ಸಂದರ್ಭದಲ್ಲಿ ವಿಭಿನ್ನ ಸ್ಥಿತಿ ಇತ್ತು. ಆದರೆ ಈ ವರ್ಷ ಬೇರೆಯದ್ದೆ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕಾಗಿ ಈ ಹಿಂದಿನ ಶಿಕ್ಷಣ ಸಚಿವರು, ಪರಿಷತ್​ ಸದಸ್ಯರು, ಅಧಿಕಾರಿಗಳು ಪೋಷಕರು, ಮಕ್ಕಳ ಅಭಿಪ್ರಾಯ ಪಡೆದುಕೊಂಡು ನಿರ್ಧಾರ ಮಾಡಿದ್ದೇವೆ ಎಂದು ಸಚಿವರು ತಿಳಿಸಿದರು.

ಸರ್ಕಾರ ನಿರ್ಧಾರ ಎಲ್ಲರಿಗೂ ಸರಿ ಎನಿಸುವುದಿಲ್ಲ. ಏಕೆಂದರೇ ಮಾಡಲೇ ಬೇಕು ಒಂದು ವರ್ಗ, ಮತ್ತೊಂದು ವರ್ಗ ಮಾಡಲೇ ಬೇಕು ಎಂದು ಹೇಳುತ್ತಿದೆ.

The post ರಾಜ್ಯದಲ್ಲೂ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು – ಮಹತ್ವದ ನಿರ್ಧಾರ ಪ್ರಕಟ appeared first on News First Kannada.

Source: newsfirstlive.com

Source link