ಬೆಂಗಳೂರು: ಸಿಬಿಎಸ್ಇ ಹನ್ನೆರಡನೇ ತರಗತಿಯ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ರದ್ದು ಮಾಡಿರುವ ಹಿನ್ನೆಲೆ ರಾಜ್ಯದಲ್ಲಿ ಪರೀಕ್ಷೆಗಳನ್ನ ನಡೆಸುವ/ನಡೆಸದಿರುವ ಕುರಿತು ಶೀಘ್ರದಲ್ಲೇ ತೀರ್ಮಾನ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: CBSE 12ನೇ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿದ ಕೇಂದ್ರ ಸರ್ಕಾರ

ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು‌ ಮಾಡಿರುವ ಹಿನ್ನೆಲೆ, ರಾಜ್ಯ ಪಠ್ಯಕ್ರಮ ಅನುಸರಿಸಿ‌ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ‌ ಕುರಿತಂತೆ ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ವಿಸ್ತೃತ ಚರ್ಚೆ‌ ನಡೆಸಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

The post ರಾಜ್ಯದಲ್ಲೂ ರದ್ದಾಗುತ್ತಾ ಪರೀಕ್ಷೆ..? ಸುರೇಶ್ ಕುಮಾರ್ ಹೇಳಿದ್ದೇನು..? appeared first on News First Kannada.

Source: newsfirstlive.com

Source link