ಬೆಂಗಳೂರು: ರಾಜ್ಯದ ಜಿಲ್ಲಾಧಿಕಾರಿಗಳ ಜೊತೆಗೆ ಇಂದು ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಮಾತುಕತೆ ನಡೆಸಿ ಜಿಲ್ಲಾಮಟ್ಟದ ಸೋಂಕಿನ ವರದಿಗಳನ್ನ ಪಡೆದುಕೊಂಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ದೇಶದ 10 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ 46 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಈ ಸಭೆಯಲ್ಲಿ ಭಾಗಿಯಾಗಿದ್ದರು. ಪ್ರಧಾನಿಗಳ ಸಂವಾದದಲ್ಲಿ ರಾಜ್ಯದ ಪರವಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಮಾತನಾಡಿ ಬೆಂಗಳೂರಿನ ವಸ್ತುಸ್ಥಿತಿಯ ಬಗ್ಗೆ ಮಾಹಿತಿ ನೀಡಿ, ಬೆಂಗಳೂರಿಗೆ ಹೆಚ್ಚಿನ ನಿಗಾ ಬೇಕು ಎಂದು ಉಲ್ಲೇಖಿಸಿದರು.

The post ರಾಜ್ಯದ ಜಿಲ್ಲಾಧಿಕಾರಿಗಳ ಜೊತೆ ಮೋದಿ ಸಭೆ: ಬೆಂಗಳೂರಿನ ಸ್ಥಿತಿಗತಿ ವಿವರಿಸಿದ ಗೌರವ್ ಗುಪ್ತಾ appeared first on News First Kannada.

Source: newsfirstlive.com

Source link