ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಶಿಕ್ಷಣ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿರುವ ಬಗ್ಗೆ ಖಚಿತ‌ಪಡಿಸಿದ ಸಚಿವರು ಪ್ರಾಥಮಿಕ ಶಾಲೆಗಳಿಗೆ ಹಿಂದೆ ತಿಳಿಸಲಾದಂತೆ ಏಪ್ರಿಲ್ 27 ರಿಂದ ಜೂನ್ 14ರವರೆಗೂ ಬೇಸಿಗೆ ರಜೆ, ಪ್ರೌಢ ಶಾಲೆಗಳಿಗೆ ಏಪ್ರಿಲ್ 27 ರಿಂದ ಮೇ 31ರ ವರೆಗೂ ಬೇಸಿಗೆ ರಜೆ ಘೋಷಿಸಲಾಗಿದೆ‌ ಎಂದು ತಿಳಿಸಿದ್ದಾರೆ.

ಪ್ರೌಢಶಾಲಾ‌ ಶಿಕ್ಷಕರು ರಜೆ ಅವಧಿಯಲ್ಲಿ‌ ಎಸ್.ಎಸ್.ಎಲ್.ಸಿ ಮಕ್ಕಳ ಪರೀಕ್ಷಾ ಸಿದ್ಧತೆಯ ಬಗ್ಗೆ ಗಮನಹರಿಸಬೇಕು, ದೂರವಾಣಿ ಮೂಲಕ ಸಂಪರ್ಕದಲ್ಲಿದ್ದು ಅವರ ಕಲಿಕೆಗೆ ಪ್ರೇರೇಪಿಸಬೇಕು ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ.

ಜೂನ್​​ 01 ರಿಂದ 14ರವರೆಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಪುನರ್ಮನನ ತರಗತಿಗಳು ನಡೆಯಲಿವೆ. ಜೂನ್ 15 ರಿಂದ 8-10 ನೇ ತರಗತಿಗಳು‌ ಪ್ರಾರಂಭವಾಗಲಿವೆ ಎಂದು ಹೇಳಿದ್ದಾರೆ.

The post ರಾಜ್ಯದ ಶಾಲೆಗಳಿಗೆ ರಜಾ ಅವಧಿ ಘೋಷಿಸಿದ ಸಚಿವ ಸುರೇಶ್ ಕುಮಾರ್ appeared first on News First Kannada.

Source: newsfirstlive.com

Source link