ನವದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾದ ಹಿನ್ನೆಲೆ ಇಂದು ಸುಮೋಟೋ ಕೇಸ್ ದಾಖಲಿಸಿಕೊಂಡು ವಿಚಾರಣೆ ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್.. ದೇಶಾದ್ಯಂತ ಕೊರೊನಾ ನಿಯತ್ರಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರಶ್ನೆ ಮಾಡಿದೆ.

ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠದಲ್ಲಿ‌ ಅರ್ಜಿ ವಿಚಾರಣೆ ನಡೆದಿದ್ದು.. ನ್ಯಾಯಾಮೂರ್ತಿಗಳಾದ ಡಿ ವೈ ಚಂದ್ರಚೂಡ್, ಎಲ್. ನಾಗೇಶ್ವರ ರಾವ್, ರವೀಂದ್ರ ಭಟ್​ರ ಪೀಠದಲ್ಲಿ ವಿಚಾರಣೆ ನಡೆಯಿತು.

ಈ ವೇಳೆ ಎಲ್ಲಾ ರಾಜ್ಯ ಸರ್ಕಾರಗಳು ಕೊರೊನಾ ಬಗ್ಗೆ ತೆಗೆದುಕೊಂಡ ಕ್ರಮಗಳ‌ ವರದಿ ಸಲ್ಲಿಸಿ ಎಂದು ಹೇಳಿದೆ. ವರದಿ ಸಲ್ಲಿಸಲು ಗುರುವಾರ ಸಂಜೆ ಅಂತಿಮ ಸಮಯವಾಗಿದೆ ಎಂದಿರುವ ಸುಪ್ರೀಂಕೋರ್ಟ್.. ವಿಚಾರಣೆಯನ್ನ ಮುಂದಿನ ಶುಕ್ರವಾರಕ್ಕೆ ಮುಂದೂಡಿಕೆ ಮಾಡಿದೆ.

The post ರಾಜ್ಯ ಸರ್ಕಾರಗಳು ಕೊರೊನಾ ನಿಯಂತ್ರಿಸಲು ಯಾವ ಕ್ರಮ ತೆಗೆದುಕೊಂಡಿದ್ದೀರಿ..? ವರದಿ ಕೇಳಿದ ಸುಪ್ರೀಂ appeared first on News First Kannada.

Source: newsfirstlive.com

Source link