ಬೆಂಗಳೂರು: ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ಉಳಿದೆಲ್ಲ ಕಡೆ ಸದ್ಯ ಇರುವ ಇಂದಿರಾ ಕ್ಯಾಂಟೀನ್​ಗಳಲ್ಲಿ ಬೆಳಗ್ಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟಗಳನ್ನು ಉಚಿತವಾಗಿ ಒದಗಿಸುವಂತೆ ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್​ ಆದೇಶ ಹೊರಡಿಸಿದ್ದಾರೆ.

ಈ ಆದೇಶ ಮೇ 24 ರವರೆಗೂ ಅಂದ್ರೆ ಲಾಕ್​ಡೌನ್ ಮುಗಿಯುವವರೆಗೂ ಇರಲಿದೆ. ಕೂಲಿ ಕಾರ್ಮಿಕರು, ವಲಸಿಗರು ಮತ್ತು ದುರ್ಬಲ ವರ್ಗದವರಿಗೆ ಅನುಕೂಲವಾಗಲೆಂದು ಪೌರಾಡಳಿತ ಸಚಿವಾಲಯ ಈ ಆದೇಶ ಹೊರಡಿಸಿರೋದಾಗಿ ಹೇಳಿದೆ.

The post ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ; ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್​ಗಳಲ್ಲಿ ಫ್ರೀ ತಿಂಡಿ, ಊಟ appeared first on News First Kannada.

Source: newsfirstlive.com

Source link