ರಾಮನಗರದಲ್ಲಿ ಮತ್ತೆ ಕಾರ್ಯಕರ್ತರ ಕಿತ್ತಾಟ: ಕಾಂಗ್ರೆಸ್ ಮಾಜಿ ​ಶಾಸಕ ಹೆಚ್​.ಸಿ.ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ – Former MLA H C Balakrishna car attacked by JDS activist, pelted stones in Ramngar


ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಮನಗರ ಜಿಲ್ಲಾ ರಾಜಕೀಯದಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆಯುತ್ತಲೇ ಇವೆ.

ರಾಮನಗರದಲ್ಲಿ ಮತ್ತೆ ಕಾರ್ಯಕರ್ತರ ಕಿತ್ತಾಟ: ಕಾಂಗ್ರೆಸ್ ಮಾಜಿ ​ಶಾಸಕ ಹೆಚ್​.ಸಿ.ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ

ಜೆಡಿಎಸ್​ ಮತ್ತು ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ

ರಾಮನಗರ: ರಾಮನಗರದಲ್ಲಿ ರಾಜಕೀಯ ಪಕ್ಷಗಳ ನಡುವೆ ಕಿತ್ತಾಟ ಜೋರಾಗುತ್ತಿದ್ದು, ಈ ಹಿಂದೆ ಕಾಮಗಾರಿ ಶಂಕುಸ್ಥಾಪನೆ ವಿಚಾರವಾಗಿ ಜೆಡಿಎಸ್​ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ವಿಧಾನ ಪರಿಷತ್​ ಸದಸ್ಯ ಸಿ.ಪಿ ಯೋಗೆಶ್ವರ ಕಾರಿನ ಮೇಲೆ ಜೆಡಿಎಸ್​ ಕಾರ್ಯಕರ್ತರು ಕಲ್ಲು ಎಸೆದಿದ್ದರು. ಈಗ ಮತ್ತೆ ಮಾಗಡಿ ತಾಲೂಕಿನ ಕಾಮಸಾಗರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ವಿಚಾರವಾಗಿ ಜೆಡಿಎಸ್​ ಕಾರ್ಯಕರ್ತರು ಕಾಂಗ್ರೆಸ್ ಮಾಜಿ ​ಶಾಸಕ ಹೆಚ್​.ಸಿ.ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಿದ್ದಾರೆ.
ಹೌದು ಇಂದು ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಕಾಮಸಾಗರ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ಉದ್ಘಾಟನೆಗೆ ಮಾಜಿ ಕಾಂಗ್ರೆಸ್​ ಶಾಸಕ ಹೆಚ್​.ಸಿ.ಬಾಲಕೃಷ್ಣ ಆಗಮಿಸಿದ್ದರು. ಇದಕ್ಕೆ ಜೆಡಿಎಸ್​ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಇನ್ನೂ ಕಾರ್ಯಕ್ರಮದ ಬ್ಯಾನರ್​ನಲ್ಲಿ ಶಾಸಕ ಮಂಜುನಾಥ್ ಹೆಸರು ಕೊನೆಯಲ್ಲಿ ಹಾಕಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿ ಗಲಾಟೆ ಮಾಡಿದ್ದಾರೆ.

ಇದರ ಮಧ್ಯಯೇ ಬಾಲಕೃಷ್ಣ ಕಟ್ಟಡವನ್ನು ಉದ್ಘಾಟಿಸಿ ಕಾರಿನಲ್ಲಿ ವಾಪಸ್​ ಆಗುತ್ತಿರುವಾಗ ಕಾರಿನ ಮೇಲೆ ಜೆಡಿಎಸ್​​ ಕಾರ್ಯಕರ್ತರು ಕಲ್ಲು ತೂರಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕುದೂರು ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಸಿದ್ದಾರೆ .

ಗಲಾಟೆಗೆ ಸಚಿವ ಅಶ್ವತ್ಥ್ ನಾರಾಯಣ ಸಂಬಂಧಿ ಶ್ರೀಧರ್​​ ಕಾರಣ

ಈ ಕುರಿತು ಮಾತನಾಡಿದ ಮಾಜಿ ಶಾಸಕ ಹೆಚ್​.ಸಿ.ಬಾಲಕೃಷ್ಣ ಶಿಷ್ಟಾಚಾರ ಪ್ರಕಾರವೇ ಉದ್ಘಾಟನೆ ಕಾರ್ಯಕ್ರಮ ನಡೆದಿದೆ. ಶಿಷ್ಟಾಚಾರ ಉಲ್ಲಂಘನೆ ಎಂದು ಆರೋಪಿಸಿ ಗಲಾಟೆ ಮಾಡಿದ್ದಾರೆ. ಗಲಾಟೆಗೆ ಸಚಿವ ಅಶ್ವತ್ಥ್ ನಾರಾಯಣ ಸಂಬಂಧಿ ಶ್ರೀಧರ್​​ ಕಾರಣ. ಶ್ರೀಧರ್​ ತನ್ನ ಪಟಾಲಂ ಕಟ್ಟಿಕೊಂಡು ಬಂದು ಗಲಾಟೆ ಮಾಡಿದ್ದಾನೆ. ಗಲಾಟೆ ಮಾಡಿದವರು ಕಾಂಗ್ರೆಸ್, ಜೆಡಿಎಸ್​ನವರ ಅಲ್ಲ ಬದಲಿಗೆ ಬಿಜೆಪಿ ಕಡೆಯವರು ಗಲಾಟೆ ಮಾಡಿದ್ದಾರೆ. ನಮ್ಮ ಕಾರಿನ ಮೇಲೂ ಕಲ್ಲು ಎಸೆದಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.