ರಾಮನಗರ: ಜೆಡಿಎಸ್ ಭದ್ರಕೋಟೆಯನ್ನು ಭೇದಿಸಿ ರಾಮನಗರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಗದ್ದುಗೆಯನ್ನ ಕಾಂಗ್ರೆಸ್ ಪಕ್ಷ ತನ್ನದಾಗಿಸಿಕೊಂಡಿದೆ.
7 ತಿಂಗಳ ಬಳಿಕ ನಡೆದ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. 30ನೇ ವಾರ್ಡ್ನ ಕಾಂಗ್ರೆಸ್ ಸದಸ್ಯೆ ಪಾರ್ವತಮ್ಮ ಅಧ್ಯಕ್ಷೆಯಾಗಿ, 1ನೇ ವಾರ್ಡ್ನ ಕಾಂಗ್ರೆಸ್ ಸದಸ್ಯೆ ಜಯಲಕ್ಷ್ಮಮ್ಮ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆಯಲ್ಲಿ ಜಯಭೇರಿ ಭಾರಿಸಿದ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಬ್ರಮಾಚರಣೆ ಮಾಡಿದ್ದಾರೆ.