ರಾಯಚೂರು: ಕಾರು ಮತ್ತೆ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಲಿಂಗಸುಗೂರು ತಾಲೂಕಿನ ನಾಗರಾಳ ಬಳಿ ನಡೆದಿದೆ.

ಬೈಕ್​​ನಲ್ಲಿ ಯುವಕ, ಯುವತಿ ಹಾಗೂ ಒಂದು ಮಗು ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಕಾರಿಗೆ ಡಿಕ್ಕಿ ಸಂಭವಿಸಿ ದುರ್ಘಟನೆ ನಡೆದಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನು ಅಪಘಾತದ ರಭಸಕ್ಕೆ ಬೈಕ್​​ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್​​ ಸಂಪೂರ್ಣ ಹಾನಿಯಾಗಿದ್ದು, ಬೆಂಕಿ ಹೊತ್ತಿಕೊಂಡು ಉರಿದಿದೆ. ಕಾರಿನ ಮುಂಭಾಗ ಜಖಂಗೊಂಡಿದೆ.

The post ರಾಯಚೂರಲ್ಲಿ ಭೀಕರ ಅಪಘಾತ; ಮಗು ಸೇರಿ ಮೂವರ ದುರ್ಮರಣ appeared first on News First Kannada.

Source: newsfirstlive.com

Source link