ರಾಷ್ಟ್ರಪತಿ ಚುನಾವಣೆ ಬಗ್ಗೆ ನಡೆಯಲಿರುವ ವಿಪಕ್ಷಗಳ ಸಭೆಗೆ ಮುನ್ನ ಶರದ್ ಪವಾರ್​​ನ್ನು ಭೇಟಿ ಮಾಡಿದ ಮಮತಾ ಬ್ಯಾನರ್ಜಿ | West Bengal CM Mamata Banerjee Meets Sharad Pawar Ahead Of Big Meet On Presidential Poll


ರಾಷ್ಟ್ರಪತಿ ಚುನಾವಣೆ ಬಗ್ಗೆ ನಡೆಯಲಿರುವ ವಿಪಕ್ಷಗಳ ಸಭೆಗೆ ಮುನ್ನ ಶರದ್ ಪವಾರ್​​ನ್ನು ಭೇಟಿ ಮಾಡಿದ ಮಮತಾ ಬ್ಯಾನರ್ಜಿ

ಮಮತಾ ಬ್ಯಾನರ್ಜಿ- ಶರದ್ ಪವಾರ್

ಬಂಗಾಳ ಮುಖ್ಯಮಂತ್ರಿ ಸುಮಾರು 22 ಪಕ್ಷಗಳನ್ನು ಸಭೆಗೆ ಕರೆದಿದ್ದಾರೆ. ಕಾಂಗ್ರೆಸ್ ಈ ಸಭೆಯಲ್ಲಿ ಭಾಗವಹಿಸಲಿದ್ದು ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತು ರಣದೀಪ್ ಸುರ್ಜೇವಾಲಾ ಪಕ್ಷವನ್ನು ಪ್ರತಿನಿಧಿಸಲಿದ್ದಾರೆ.

ದೆಹಲಿ: ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ (Presidential polls)ಸಂಬಂಧಿಸಿದಂತೆ ಪ್ರತಿಪಕ್ಷಗಳ ಚಟುವಟಿಕೆ ತೀವ್ರವಾಗಿರುವ ಹಿನ್ನೆಲೆಯಲ್ಲಿ ಶರದ್ ಪವಾರ್ (Sharad Pawar) ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ದೆಹಲಿಯಲ್ಲಿ ಭೇಟಿಯಾದರು. ಜುಲೈ 18 ರ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯ ಕುರಿತು ಒಮ್ಮತ ಮೂಡಿಸಲು ಮಮತಾ ಬ್ಯಾನರ್ಜಿ (Mamata Banerjee) ಕರೆದಿದ್ದ ದೊಡ್ಡ ವಿರೋಧ ಪಕ್ಷದ ಸಭೆಗೆ ಒಂದು ದಿನ ಮೊದಲು ಉಭಯ ನಾಯಕರು ಭೇಟಿಯಾಗಿದ್ದಾರೆ. ಶರದ್ ಪವಾರ್ ಮತ್ತು ಮಮತಾ ಬ್ಯಾನರ್ಜಿ ಅವರ ಪಕ್ಷವು ಭೇಟಿಯ ಫೋಟೋಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. ಮಮತಾ ಬ್ಯಾನರ್ಜಿ ಅವರು ಇಂದು ದೆಹಲಿಯ ನನ್ನ ನಿವಾಸದಲ್ಲಿ ನನ್ನನ್ನು ಭೇಟಿ ಮಾಡಿದರು. ನಮ್ಮ ದೇಶಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ನಾವು ವಿವರವಾದ ಚರ್ಚೆ ನಡೆಸಿದ್ದೇವೆ ಎಂದು ಪವಾರ್ ಟ್ವೀಟ್ ಮಾಡಿದ್ದಾರೆ.  ಇಬ್ಬರು ಧೀಮಂತ ನಾಯಕರು ಎಲ್ಲಾ ಪ್ರಗತಿಪರ ವಿರೋಧ ಶಕ್ತಿಗಳ ಸಭೆಗೆ ವೇದಿಕೆಯನ್ನು ಸಿದ್ಧಪಡಿಸಿದರು. ಈ ಸಭೆ ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ನಲ್ಲಿ ನಾಳೆ ನಡೆಯಲಿದೆ. ವಿಭಜಕ ಶಕ್ತಿಗಳ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಬಲಗೊಳ್ಳುತ್ತದೆ ಎಂದು ಟಿಎಂಸಿ ಟ್ವೀಟ್ ಮಾಡಿದೆ. ಮಮತಾ ಬ್ಯಾನರ್ಜಿ ವಿರೋಧ ಪಕ್ಷದ ಸಭೆಗಾಗಿ ಇಂದು ಮಧ್ಯಾಹ್ನ ದೆಹಲಿಗೆ ಬಂದಿದ್ದು ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ.

ಬಂಗಾಳ ಮುಖ್ಯಮಂತ್ರಿ ಸುಮಾರು 22 ಪಕ್ಷಗಳನ್ನು ಸಭೆಗೆ ಕರೆದಿದ್ದಾರೆ. ಕಾಂಗ್ರೆಸ್ ಈ ಸಭೆಯಲ್ಲಿ ಭಾಗವಹಿಸಲಿದ್ದು ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತು ರಣದೀಪ್ ಸುರ್ಜೇವಾಲಾ ಪಕ್ಷವನ್ನು ಪ್ರತಿನಿಧಿಸಲಿದ್ದಾರೆ.

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಶರದ್ ಪವಾರ್ ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದೆ. ನಿನ್ನೆ ಸಂಜೆ ಮುಂಬೈನಲ್ಲಿ ನಡೆದ ಎನ್‌ಸಿಪಿ ಸಭೆಯಲ್ಲಿ “ನಾನು ರೇಸ್‌ನಲ್ಲಿ ಇಲ್ಲ, ನಾನು ರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷದ ಅಭ್ಯರ್ಥಿಯಾಗುವುದಿಲ್ಲ” ಎಂದು ಮಾಜಿ ಕೇಂದ್ರ ಸಚಿವರು ಹೇಳಿದ್ದಾರೆಂದು ವರದಿಯಾಗಿದೆ.

ರಾಷ್ಟ್ರಪತಿ ಅಭ್ಯರ್ಥಿಯಾಗಿ ಪವಾರ್ ಅವರಿಗೆ ಕಾಂಗ್ರೆಸ್ ಬೆಂಬಲ ಸೂಚಿಸಿದ ನಂತರ ಶರದ್ ಪವಾರ್  ರಾಷ್ಟ್ರಪತಿ ಅಭ್   ಪ್ರಾರಂಭವಾಯಿತು. ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ವಾರ ಎನ್‌ಸಿಪಿ ನಾಯಕರನ್ನು ಅವರ ಮುಂಬೈ ಮನೆಯಲ್ಲಿ ಸೋನಿಯಾ ಗಾಂಧಿಯವರ ಸಂದೇಶದೊಂದಿಗೆ ಭೇಟಿಯಾದರು.

ಆದರೆ ಎನ್‌ಸಿಪಿ ತನ್ನ ನಾಯಕನಿಗೆ ಸೋಲುವ ಹೋರಾಟ ಮಾಡಲು ಇಷ್ಟವಿಲ್ಲ ಎಂದು ಹೇಳಿದೆ.

TV9 Kannada


Leave a Reply

Your email address will not be published.