ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಹೆಸರು ಘೋಷಣೆ ಸಾಧ್ಯತೆ | Former union minister Yashwant Sinha to be declared opposition’s presidential polls candidate


ರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಹೆಸರು ಘೋಷಣೆ ಸಾಧ್ಯತೆ

ಯಶವಂತ್ ಸಿನ್ಹಾ

Image Credit source: Deccanherald

ಟಿಎಂಸಿಯಲ್ಲಿ ಮಮತಾ ಜೀ ಅವರು ನನಗೆ ನೀಡಿದ ಗೌರವ ಮತ್ತು ಪ್ರತಿಷ್ಠೆಗೆ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ವಿರೋಧ ಪಕ್ಷಗಳ ಏಕತೆಗಾಗಿ ಕೆಲಸ ಮಾಡಲು ಈಗ ಒಂದು ದೊಡ್ಡ ರಾಷ್ಟ್ರೀಯ ಉದ್ದೇಶಕ್ಕಾಗಿ ನಾನು ಪಕ್ಷದಿಂದ ದೂರ ಸರಿಯಬೇಕಾದ ಸಮಯ ಬಂದಿದೆ…

ದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ (Presidential polls) ವಿರೋಧ ಪಕ್ಷಗಳ  ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ(Yashwant Sinha) ಅವರ ಹೆಸರನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಊಹಾಪೋಹಕ್ಕೆ ಪುಷ್ಠಿ ನೀಡುವಂತೆ ಮಂಗಳವಾರ ಬೆಳಗ್ಗೆ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು ಟ್ವೀಟ್ ಮಾಡಿದ್ದಾರೆ. “ಟಿಎಂಸಿಯಲ್ಲಿ ಮಮತಾ ಜೀ ಅವರು ನನಗೆ ನೀಡಿದ ಗೌರವ ಮತ್ತು ಪ್ರತಿಷ್ಠೆಗೆ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ವಿರೋಧ ಪಕ್ಷಗಳ ಏಕತೆಗಾಗಿ ಕೆಲಸ ಮಾಡಲು ಈಗ ಒಂದು ದೊಡ್ಡ ರಾಷ್ಟ್ರೀಯ ಉದ್ದೇಶಕ್ಕಾಗಿ ನಾನು ಪಕ್ಷದಿಂದ ದೂರ ಸರಿಯಬೇಕಾದ ಸಮಯ ಬಂದಿದೆ. ಅವರು ಈ ಹೆಜ್ಜೆಯನ್ನು ಅನುಮೋದಿಸುತ್ತಾರೆ ಎಂದು ನನಗೆ ಖಾತ್ರಿಯಿದೆ ”ಎಂದು 84ರ ಹರೆಯದ ಸಿನ್ಹಾ ಟ್ವೀಟ್ ಮಾಡಿದ್ದಾರೆ.

(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)

TV9 Kannada


Leave a Reply

Your email address will not be published.