ರಾಷ್ಟ್ರ ರಾಜಧಾನಿಯಲ್ಲೂ ಕಲ್ಲಿದ್ದಲಿಗೆ ಅಭಾವ.. ಪ್ರಧಾನಿಗೆ ಕೇಜ್ರಿವಾಲ್ ಪತ್ರ

ನವದೆಹಲಿ: ಕರ್ನಾಟಕ ಸೇರಿದಂತೆ ದೇಶದಾದ್ಯಂತ ಬಹುತೇಕ ವಿದ್ಯುತ್ ಘಟಕಗಳಲ್ಲಿ ಕಲ್ಲಿದ್ದಲಿನ ಅಭಾವ ಎದುರಾಗಿದೆ. ಇತ್ತ ದೇಶದ ರಾಜಧಾನಿ ದೆಹಲಿಯಲ್ಲೂ ಕಲ್ಲಿದ್ದಲಿನ ಕೊರತೆ ಎದುರಾಗಿದ್ದು ವಿದ್ಯುತ್ ಉತ್ಪಾದನೆಗೆ ತೊಂದರೆಯಾಗುತ್ತಿದೆ ಎಂದು ದೆಹಲಿ ಸರ್ಕಾರ ಆತಂಕ ವ್ಯಕ್ತಪಡಿಸಿದೆ.

 

ರಾಷ್ಟ್ರ ರಾಜಧಾನಿಯಲ್ಲೂ ಕಲ್ಲಿದ್ದಲಿನ ಕೊರತೆ ಎದುರಾದ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ದೆಹಲಿಗೆ ವಿದ್ಯುತ್ ಪೂರೈಕೆ ಮಾಡುತ್ತಿರುವ ಘಟಕಗಳಿಗೆ ಅಗತ್ಯವಿರುವ ಗ್ಯಾಸ್ ಮತ್ತು ಕಲ್ಲಿದ್ದಲನ್ನು ಪೂರೈಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಸೇರಿದಂತೆ ಎಲ್ಲೆಲ್ಲೂ ಕಲ್ಲಿದ್ದಲಿಗೆ ಅಭಾವ; ಕಗ್ಗತ್ತಲಲ್ಲಿ ಮುಳುಗಲಿದ್ಯಾ ದೇಶ..?

ದೇಶದಾದ್ಯಂತ ಕೊರೊನಾ ಸೋಂಕು ಕ್ಷೀಣವಾದ ಬೆನ್ನಲ್ಲೇ ಕೈಗಾರಿಕಾ ಉದ್ಯಮಗಳು ಕೆಲಸ ಪ್ರಾರಂಭಿಸಿದ್ದರಿಂದ ಕಲ್ಲಿದ್ದಲಿನ ಕೊರತೆ ಎದುರಾಗಿದೆ ಎನ್ನಲಾಗಿದೆ. ದೇಶದ 135ಕ್ಕೂ ಹೆಚ್ಚು ಕಲ್ಲಿದ್ದಲು ಆಧಾರಿತ ವಿದ್ಯುತ್ ಘಟಕಗಳು ಈಗಾಗಲೇ ಅಭಾವ ಎದುರಿಸುತ್ತಿದ್ದು ಕಲ್ಲಿದ್ದಲಿನ ಪೂರೈಕೆ ವಿಳಂಬವಾದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಇತ್ತ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಕೇಂದ್ರ ಕಲ್ಲಿದ್ದಲು ಸಚಿವ ಪಲ್ಹಾದ್ ಜೋಶಿಯವರನ್ನು ಭೇಟಿಯಾಗಿ ಕಲ್ಲಿದ್ದಲು ಕೊರತೆ ನೀಗಿಸುವಂತೆ ಮನವಿ ಮಾಡಿದ್ದಾರೆ.

News First Live Kannada

Leave a comment

Your email address will not be published. Required fields are marked *