ರಾಹುಲ್ ಗಾಂಧಿ ಇಡಿ ವಿಚಾರಣೆ ಖಂಡಿಸಿ ರಾಜ್ಯಾದ್ಯಂತ ಮುಂದುವರೆದ ಕಾಂಗ್ರೆಸ್ ಪ್ರತಿಭಟನೆ; ವಿಚಾರಣೆ ಮಾಡಬಾರದೆಂಬ ಒತ್ತಡ‌ ಒಂದು ರೀತಿ ಗೂಂಡಾಗಿರಿ ಎಂದ ಕೆ.ಎಸ್.ಈಶ್ವರಪ್ಪ | Congress Protest across karnataka against state and central govt over rahul gandhi ed investigation


ರಾಹುಲ್ ಗಾಂಧಿ ಇಡಿ ವಿಚಾರಣೆ ಖಂಡಿಸಿ ರಾಜ್ಯಾದ್ಯಂತ ಮುಂದುವರೆದ ಕಾಂಗ್ರೆಸ್ ಪ್ರತಿಭಟನೆ; ವಿಚಾರಣೆ ಮಾಡಬಾರದೆಂಬ ಒತ್ತಡ‌ ಒಂದು ರೀತಿ ಗೂಂಡಾಗಿರಿ ಎಂದ ಕೆ.ಎಸ್.ಈಶ್ವರಪ್ಪ

ಕಾಂಗ್ರೆಸ್ ಪ್ರತಿಭಟನೆ

ವಿಜಯಪುರ, ಮಂಡ್ಯ, ರಾಯಚೂರು, ಚಾಮರಾಜನಗರ, ಮಡಿಕೇರಿ, ಉಡುಪಿ, ಕೊಪ್ಪಳ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೈ ನಾಯಕರು ಬಿಜೆಪಿ ವಿರುದ್ಧ & ಮೋದಿ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಬೆಂಗಳೂರು: ರಾಹುಲ್ ಗಾಂಧಿ(Rahul Gandhi) ಇಡಿ ವಿಚಾರಣೆ ಖಂಡಿಸಿ, ಕಾಂಗ್ರೆಸ್ ನಿನ್ನೆ ದೊಡ್ಡ ಮಟ್ಟದಲ್ಲಿ ಱಲಿ ಮಾಡಿತ್ತು ಇಂದು ಕೂಡ ಈ ಪ್ರತಿಭಟನೆ(Congress Protest) ಮುಂದುವರೆದಿದೆ. ವಿಜಯಪುರ, ಮಂಡ್ಯ, ರಾಯಚೂರು, ಚಾಮರಾಜನಗರ, ಮಡಿಕೇರಿ, ಉಡುಪಿ, ಕೊಪ್ಪಳ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೈ ನಾಯಕರು ಬಿಜೆಪಿ ವಿರುದ್ಧ & ಮೋದಿ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಐಟಿ ಕಚೇರಿಗೆ ನುಗ್ಗಲೆತ್ನಿಸಿದ ಕಾರ್ಯಕರ್ತರು ವಶ
ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನಾ ಱಲಿ ಹಮ್ಮಿಕೊಂಡಿದ್ದು ಫಳ್ನೀರ್ ಎಸ್.ಎಲ್.ಮಥಾಯಿಸ್ ಪಾರ್ಕ್ನಿಂದ ಅತ್ತಾವರದ ಐಟಿ ಕಚೇರಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಐಟಿ ಕಚೇರಿ ಬಳಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಲಾಗುತ್ತಿದೆ. ಮಾಜಿ ಸಚಿವ ರಮಾನಾಥ ರೈ, ಐವನ್ ಡಿಸೋಜಾ ಮತ್ತಿತರು ಭಾಗಿಯಾಗಿದ್ದು ಐಟಿ ಕಚೇರಿಗೆ ನುಗ್ಗಲೆತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಮತ್ತೊಂದು ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ನೇತೃತ್ವದಲ್ಲಿ ಬಳ್ಳಾರಿ ರಾಯಲ್ ವೃತ್ತದಲ್ಲಿ ‘ಕೈ’ ಕಾರ್ಯರ್ತರ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಪುರಭವನದಿಂದ ನಜರ್ಬಾದ್ನ ಐಟಿ ಕಚೇರಿವರೆಗೆ ಮೆರವಣಿಗೆ ನಡೆಸಲಾಗುತ್ತಿದ್ದು ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಅನಿಲ್ ಚಿಕ್ಕಮಾದು, ಡಾ.ಹೆಚ್.ಸಿ.ಮಹದೇವಪ್ಪ, ಡಾ.ಬಿ.ಜೆ.ವಿಜಯಕುಮಾರ್ ಭಾಗಿಯಾಗಿದ್ದಾರೆ. ಚಿತ್ರದುರ್ಗದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಟನೆ ನಡೆಸಿದ್ದು ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಲಾಗುತ್ತಿದೆ. ಪ್ರತಿಭಟನೆಯಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ MLC ರಘು ಆಚಾರ್, ಕಾಂಗ್ರೆಸ್ ಜಿಲ್ಲಾದ್ಯಕ್ಷ ತಾಜ್ ಪೀರ್ ಭಾಗಿಯಾಗಿದ್ದಾರೆ.

TV9 Kannada


Leave a Reply

Your email address will not be published.