ರಿಲೀಸ್​​ಗೂ ಮುನ್ನವೇ ‘ಕಾಲಚಕ್ರ’ಕ್ಕೆ ಶಹಬ್ಬಾಸ್ ​ಗಿರಿ.. ಅಂತಾರಾಷ್ಟ್ರೀಯ ಮಟ್ಟದಲ್ಲೂ ಖ್ಯಾತಿ

ರಿಲೀಸ್​​ಗೂ ಮುನ್ನವೇ ‘ಕಾಲಚಕ್ರ’ಕ್ಕೆ ಶಹಬ್ಬಾಸ್ ​ಗಿರಿ.. ಅಂತಾರಾಷ್ಟ್ರೀಯ ಮಟ್ಟದಲ್ಲೂ ಖ್ಯಾತಿ

ವಸಿಷ್ಠ ಸಿಂಹ ನಾಯಕರಾಗಿ ಅಭಿನಯಿಸಿರುವ ‘ಕಾಲಚಕ್ರ’ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಅದಕ್ಕೂ ಮುನ್ನವೇ ಪಶ್ಚಿಮ ಬಂಗಾಳದ ಟ್ಯಾಗೂರ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡು, ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿದೆ.

ನ್ಯೂಯಾರ್ಕ್, ಪ್ಯಾರಿಸ್ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಗಳಲ್ಲೂ ಪ್ರದರ್ಶನಕ್ಕೆ ಈ ಚಿತ್ರ ಆಯ್ಕೆಯಾಗಿದೆ. ನ್ಯೂಯಾರ್ಕ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲು ಸುಮಾರು 3500 ಸಾವಿರಕ್ಕೂ ಅಧಿಕ ಚಿತ್ರಗಳು ಬಂದಿದ್ದವು. ಅದರಲ್ಲಿ 100 ಚಿತ್ರಗಳು ಮಾತ್ರವೇ ಆಯ್ಕೆಯಾಗಿದ್ದು, ಅದರಲ್ಲಿ ನಮ್ಮ ಕನ್ನಡದ ‘ಕಾಲಚಕ್ರ’ ಚಿತ್ರ ಸಹ ಒಂದು ಎಂದಿದ್ದಾರೆ ನಿರ್ದೇಶಕ ಸುಮಂತ್ ಕ್ರಾಂತಿ.

ಈ ಚಿತ್ರಕ್ಕೆ ಪ್ರಶಸ್ತಿ ದೊರಕುವ ಭರವಸೆಯನ್ನ ನಿರ್ದೇಶಕರು ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸುಮಾರು 25ಕ್ಕೂ ಹೆಚ್ಚು ದೇಶಗಳ ಚಲನ ಚಿತ್ರೋತ್ಸವಗಳಿಗೆ “ಕಾಲಚಕ್ರ” ಚಿತ್ರವನ್ನು ಕಳುಹಿಸುವ ಯೋಜನೆಯನ್ನ ಚಿತ್ರತಂಡ ಹೊಂದಿದೆ. ಇತ್ತೀಚೆಗೆ ಈ ಚಿತ್ರದ ರಿಮೇಕ್ ಹಕ್ಕು ಮಲೆಯಾಳಂ ಭಾಷೆಗೆ ಮಾರಾಟವಾಗಿದ್ದು, ಅಲ್ಲಿನ ಖ್ಯಾತ ನಿರ್ಮಾಪಕರೊಬ್ಬರು ‘ಕಾಲಚಕ್ರ’ವನ್ನು ಮಲೆಯಾಳಂನಲ್ಲಿ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

ವಸಿಷ್ಠ ಸಿಂಹ ನಾಲ್ಕು ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿರುವ ಈ ಚಿತ್ರದ ಟೀಸರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಶ್ಮಿ ಫಿಲಂಸ್ ಲಾಂಛನದಲ್ಲಿ ನಿರ್ದೇಶಕ ಸುಮಂತ್ ಕ್ರಾಂತಿ ಅವರೇ ನಿರ್ಮಾಣವನ್ನು ಮಾಡಿದ್ದಾರೆ. ಗುರುಕಿರಣ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳನ್ನು ಚೇತನ್ ಕುಮಾರ್, ಕವಿರಾಜ್, ಸಂತೋಷ್ ನಾಯಕ್ ಬರೆದಿದ್ದಾರೆ. ಸಂಚಿತ್ ಹೆಗ್ಡೆ, ಕೈಲಾಷ್ ಖೇರ್, ಪಂಚಮ್ ಜೀವ ಹಾಡಿದ್ದಾರೆ.

ಎಲ್​ಎಂ ಸೂರಿ ಛಾಯಾಗ್ರಹಣ, ಸೌಂದರ್ ರಾಜ್ ಸಂಕಲನ, ಡಿಫರೆಂಟ್ ಡ್ಯಾನಿ‌ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಬಿ.ಎ.ಮಧು ಸಂಭಾಷಣೆ ಬರೆದಿದ್ದಾರೆ.

The post ರಿಲೀಸ್​​ಗೂ ಮುನ್ನವೇ ‘ಕಾಲಚಕ್ರ’ಕ್ಕೆ ಶಹಬ್ಬಾಸ್ ​ಗಿರಿ.. ಅಂತಾರಾಷ್ಟ್ರೀಯ ಮಟ್ಟದಲ್ಲೂ ಖ್ಯಾತಿ appeared first on News First Kannada.

Source: newsfirstlive.com

Source link