ರೇಖಾ ಕದಿರೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬ ಪೊಲೀಸ್ ವಶಕ್ಕೆ

ರೇಖಾ ಕದಿರೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬ ಪೊಲೀಸ್ ವಶಕ್ಕೆ

ಬೆಂಗಳೂರು: ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ತೀವ್ರಗೊಳಿಸಿದ್ದಾರೆ.

ಹೊಸೂರು ರಸ್ತೆಯ ಹುಸ್ಕೂರು ಬಳಿ ಪ್ರಕರಣದ ಮೂವರು ಪ್ರಮುಖ ಆರೋಪಿಗಳಲ್ಲಿ ಒರ್ವನನ್ನು ವಶಕ್ಕೆ ಪಡೆದುಕೊಂಳ್ಳಲಾಗಿದೆ. ಪೊಲೀಸರು ಆರೋಪಿಯನ್ನು ತೀವ್ರ ವಿಚಾರಣೆ ಒಳಪಡಿಸಿದ್ದಾರೆ.

ಪ್ರಕರಣದ ಮೂವರು ಆರೋಪಿಗಳು ಒಟ್ಟಿಗೆ ಇರುವ ಬಗ್ಗೆ ಕಾಟನ್ಪೇಟೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು ಎನ್ನಲಾಗಿದೆ. ಕೊಲೆ ಮಾಡಿದ ಬಳಿಕ ಆರೋಪಿಗಳು ಆಟೋದಲ್ಲಿ ಹೊಸೂರು ರಸ್ತೆಯ ಬಳಿ ಹೋಗಿದ್ದರು ಎಂಬ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ ಒಬ್ಬನನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತಿಬ್ಬರು ಆರೋಪಿಗಳು ಎಸ್ಕೇಪ್​ ಆಗಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿಗಳಾದ ಪೀಟರ್ ಹಾಗೂ ಸ್ಟೀಫನ್ಗಾಗಿ ತೀವ್ರ ಹುಡುಕಾಟ ನಡೆಸಿದ್ದು, ಮಧ್ಯಾಹ್ನದ ಒಳಗೆ ಆರೋಪಿಗಳನ್ನು ವಶಕ್ಕೆ ಪಡೆಯುವುದಾಗಿ ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

The post ರೇಖಾ ಕದಿರೇಶ್ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬ ಪೊಲೀಸ್ ವಶಕ್ಕೆ appeared first on News First Kannada.

Source: newsfirstlive.com

Source link