ಬೆಂಗಳೂರು: ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ್ದ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನ ಚುರುಕುಗೊಳಿಸಿದ್ದು ಒಬ್ಬೊಬ್ಬರನ್ನಾಗಿ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ.

ಇಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಡ್ರೈವರ್​ ಓರ್ವನನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆಟೋ ಡ್ರೈವರ್ ಡಿಸೋಜಾ ಆರೋಪಿಗಳಾದ ಪೀಟರ್ ಹಾಗೂ ಸೂರ್ಯನಿಗೆ ಡ್ರಾಪ್ ನೀಡಿದ್ದ ಎನ್ನಲಾಗಿದೆ. ಸದ್ಯ ಕಾಟನ್ ಪೇಟೆ ಪೊಲೀಸರು ಡಿಸೋಜಾನನ್ನ ಬಂಧಿಸಿದ್ದಾರೆ. ಇನ್ನೊಂದೆಡೆ ಇಂದು ಮೂವರು ಆರೋಪಿಗಳನ್ನ ಕೋರ್ಟ್​​ಗೆ ಹಾಜರುಪಡಿಸಲಾಗಿತ್ತು. ಅವರನ್ನ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

The post ರೇಖಾ ಕದಿರೇಸ್ ಕೊಲೆ ಕೇಸ್: ಮತ್ತೋರ್ವ ಆರೋಪಿ ಆಟೋ ಡ್ರೈವರ್ ಅರೆಸ್ಟ್ appeared first on News First Kannada.

Source: newsfirstlive.com

Source link