ಬೆಂಗಳೂರು: ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಕೊಲೆ ಪ್ರಕರಣದ ಆರೋಪಿಗಳಾದ ಪೀಟರ್ ಹಾಗು ಸೂರ್ಯ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಾಮಾಕ್ಷಿಪಾಳ್ಯದಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಉಪ್ಪರಾಪೇಟೆ ಇನ್ಸ್​​ಪೆಕ್ಟರ್ ಶಿವಸ್ವಾಮಿ ಅವರು ಆರೋಪಿಗಳ ಮೇಲೆ ಶೂಟೌಟ್​ ಮಾಡಿದ್ದಾರೆ.

ನಿನ್ನೆ ಬೆಳಗ್ಗೆ 9.45ರ ವೇಳೆಗೆ ನಗರದ ಛಲವಾದಿಪಾಳ್ಯದ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಛಲವಾದಿ ಪಾಳ್ಯದ ಫ್ಲವರ್ ಗಾರ್ಡನ್​​​ನಲ್ಲಿ ರೇಖಾ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು. ಕೂಡಲೇ ರೇಖಾರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಪ್ರರಕಣದ ವಿಚಾರಣೆಯನ್ನು ತೀವ್ರಗೊಳಿಸಿದ್ದ ಪೊಲೀಸರು ಬೆಳಗ್ಗೆಯಷ್ಟೇ ಪ್ರಕರಣ ಪ್ರಮುಖ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಿದ್ದರು. ಈ ವೇಳೆ ಪೀಟರ್​ ಸೇರಿದಂತೆ ಇಬ್ಬರು ಸ್ಥಳದಿಂದ ಎಸ್ಕೇಪ್ ಆಗಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು.

The post ರೇಖಾ ಮಾರ್ಡರ್​ ಕೇಸ್​​; ಆರೋಪಿಗಳ ಕಾಲಿಗೆ ಗುಂಡಿಟ್ಟ ಪೊಲೀಸರು appeared first on News First Kannada.

Source: newsfirstlive.com

Source link