ರೈತರ ಅನುಕೂಲಕ್ಕಾಗಿ ವಿವಾದಿತ 3 ಕೃಷಿ ಕಾಯ್ದೆ ವಾಪಸ್, ಎಲೆಕ್ಷನ್​​ಗೂ ಇದಕ್ಕೂ ಸಂಬಂಧವಿಲ್ಲ -ಕೃಷಿ ಸಚಿವ


ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂದು ಮಹತ್ವದ ನಿರ್ಧಾರವನ್ನ ಘೋಷಿಸಿದೆ. ರೈತರಿಂದ ಭಾರೀ ವಿರೋಧಕ್ಕೆ ಕಾರಣವಾಗಿದ್ದ ಮೂರು ಕೃಷಿ ಕಾಯ್ದೆಗಳನ್ನ ಕೇಂದ್ರ ಸರ್ಕಾರ ವಾಪಸ್ ಪಡೆದುಕೊಳ್ಳುವುದಾಗಿ ಹೇಳಿದೆ.

ಉತ್ತರ ಪ್ರದೇಶ, ಪಂಜಾಬ್​ ಚುನಾವಣೆ ಹಿನ್ನೆಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂಬ ಕಾಂಗ್ರೆಸ್​ ಆರೋಪಕ್ಕೆ ಉತ್ತರಿಸಿದ ಕೃಷಿ ಸಚಿವ ಬಿ.ಸಿ.ಪಾಟೀಲ್​ ಇದು ರೈತರ ಅನುಕೂಲಕ್ಕಾಗಿ ತೆಗೆದುಕೊಂಡ ನಿರ್ಧಾರ ಎಂದಿದ್ದಾರೆ. ನ್ಯೂಸ್​ಫಸ್ಟ್​ ಜೊತೆ ಮಾತನಾಡಿದ ಅವರು ಉತ್ತರ ಪ್ರದೇಶದಲ್ಲಿ ಈಗಾಗಲೇ ಸಮೀಕ್ಷೆಯ ಫಲಿತಾಂಶಗಳು ಹೊರಬಿದ್ದಿದ್ದು ಪಕ್ಷಕ್ಕೆ ಬಹುಮತ ಸಿಕ್ಕಿದೆ. ಹೀಗಾಗಿ ಈ ನಿರ್ಧಾರಕ್ಕೂ ಚುನಾವಣೆಗೆ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

ಇದನ್ನೂ ಓದಿ:BIG BREAKING ನೂತನ 3 ಕೃಷಿ ಕಾನೂನು ವಾಪಸ್​ -ಪ್ರಧಾನಿ ಮೋದಿ ಘೋಷಣೆ

ಈ ಕಾಯ್ದೆಗಳನ್ನು ಮೋದಿ ಅವರು ಸಾಕಷ್ಟು ಬಾರಿ ಸಭೆ ನಡೆಸಿ ರೈತರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ದೆಹಲಿ ಗಡಿಯಲ್ಲಿ ಪ್ರತಿಭಟನೆ ಮಾಡಿದವರು ನಿಜವಾದ ರೈತರಲ್ಲ. ಅದ್ಯಾಗೂ ರೈತರ ಹಿತದೃಷ್ಟಿಯಿಂದ ಪ್ರಧಾನಿಗಳು ಈ ನಿರ್ಧಾರ ತೆಗೆದುಕೊಂಡಿದ್ದನ್ನು ನಾವು ಸ್ವಾಗತಿಸುತ್ತೇವೆ. ಇದರಿಂದ ಕೇಂದ್ರ ಸರ್ಕಾರಕ್ಕೆ ಯಾವುದೇ ಹಿನ್ನೆಡೆಯಾಗೋದಿಲ್ಲ ಎಂದಿದ್ದಾರೆ.

ಇದನ್ನೂ ಓದಿ:ಅನ್ನದಾತರ ಹೋರಾಟಕ್ಕೆ ಮಣಿದ ಮೋದಿ ಸರ್ಕಾರ; ವಾಪಸ್ ಪಡೆದ 3 ಕೃಷಿ ಕಾಯ್ದೆಗಳು ಯಾವುದು..?

News First Live Kannada


Leave a Reply

Your email address will not be published. Required fields are marked *