ಬೆಂಗಳೂರು: ಸರ್ಕಾರದ ನೀತಿಗಳು ಮತ್ತು ಕೋವಿಡ್ ಮುಂತಾದ ಕಾರಣಗಳಿಂದಾಗಿ ಇಂದು ರೈತರ ಬಳಿ ಬಿತ್ತನೆ ಚಟುವಟಿಕೆಗಳಿಗೆ ಕೈಯಲ್ಲಿ ಹಣವಿಲ್ಲದಂತಾಗಿದೆ. ಈ ಹಿನ್ನಲೆಯಲ್ಲಿ ರೈತರಿಗೆ ಉಚಿತವಾಗಿ ಬೀಜ, ಗೊಬ್ಬರ ನೀಡಲು ಕ್ರಮವಹಿಸಿ ಎಂದು ಸಿಎಂ ಬಿಎಸ್ ​ಯಡಿಯೂರಪ್ಪ ಅವರಿಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಒತ್ತಾಯ ಮಾಡಿದ್ದಾರೆ.

ರೈತರ ಸಮಸ್ಯೆಗಳ ಕುರಿತು ಸಿಎಂಗೆ ಪತ್ರ ಬರೆದಿರುವ ಸಿದ್ದರಾಮ್ಯ ಅವರು, ಕೂಡಲೇ ಸಾಲ ವಿತರಣೆ ಚಟುವಟಿಕೆಗಳನ್ನು ಆರಂಭಿಸಬೇಕು. ಹೆಸರು, ಉದ್ದು, ಅಲಸಂಡೆ, ತೊಗರಿ ಮುಂತಾದ ದ್ವಿದಳ ಧಾನ್ಯಗಳು ಹಾಗೂ ಸೋಯಾ, ಶೇಂಗಾ ಮುಂತಾದ ಎಣ್ಣೆ ಬೀಜಗಳನ್ನು ಹೇಗಾದರೂ ಮಾಡಿ ಸಂಗ್ರಹಿಸಿ ಬೇಡಿಕೆ ಇದ್ದಷ್ಟು ನೀಡಲು ಕೂಡಲೇ ಸಮರೋಪಾದಿಯಲ್ಲಿ ಸಮರ್ಪಕ ಕ್ರಮಗಳನ್ನು ಕೈಗೊಳ್ಳಿ ಎಂದು ಸಿಎಂ ಪತ್ರದಲ್ಲಿ ಆಗ್ರಹಿಸಿದ್ದಾರೆ.

The post ರೈತರ ಪರ ಸಿದ್ದರಾಮಯ್ಯ ಸಿಎಂಗೆ ಪತ್ರ.. ಮಾಜಿ ಸಿಎಂ ಆಗ್ರಹ ಏನು? appeared first on News First Kannada.

Source: newsfirstlive.com

Source link