ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮೆಗಾ ಹರಾಜುಗೆ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ರವೀಂದ್ರ ಜಡೇಜಾ, ಎಂಎಸ್ ಧೋನಿ, ಮೊಯಿನ್ ಅಲಿ ಮತ್ತು ರುತುರಾಜ್ ಗಾಯಕ್ವಾಡ್ ಅವರನ್ನು ರಿಟೈನ್ ಮಾಡಿಕೊಂಡಿದೆ. ಆದರೆ, ತಂಡದ ಬಲಿಷ್ಠ ಆಟಗಾರರಾದ ಸುರೇಶ್ ರೈನಾ ಮತ್ತು ಫಾಫ್ ಡು ಪ್ಲೆಸಿಸ್ ಅವರನ್ನು ರಿಟೈನ್ ಮಾಡಿಕೊಳ್ಳದೇ ಇರುವುದು ಸದ್ಯ ಸಾಕಷ್ಟು ಚರ್ಚೆಗಳಿಗೆ ಕಾರಣವಾಗಿದೆ. ಈ ಬೆನ್ನಲ್ಲೇ ಇದರ ಬಗ್ಗೆ ಮಾತಾಡಿರುವ ಚೆನ್ನೈ ತಂಡದ ಸಿಇಒ ಕಾಶಿ ವಿಶ್ವನಾಥನ್ ಸ್ಪಷ್ಟನೆ ನೀಡಿದ್ದಾರೆ.
ನಾವು ಮತ್ತೆ ಫಾಫ್ ಡು ಪ್ಲೆಸಿಸ್ ಅವರನ್ನು ತಂಡಕ್ಕೆ ಕರೆತರುವ ಪ್ರಯತ್ನ ಮಾಡುತ್ತೇವೆ. ಇವರಿಂದಲೇ ನಾವು ಹಲವು ಬಾರಿ ಐಪಿಎಲ್ ಫೈನಲ್ಗೆ ಹೋಗಿದ್ದೆವು. ಹೀಗಾಗಿ ಮೆಗಾ ಹರಾಜಿನಲ್ಲಿ ಫಾಫ್ ಡು ಪ್ಲೆಸಿಸ್ ಅವರನ್ನು ಖರೀದಿಸುವುದು ನಮ್ಮ ಕರ್ತವ್ಯ ಎಂದರು.
ಈ ಬಾರಿ ಫಾಫ್ ಡು ಪ್ಲೆಸಿಸ್ ಆಡಿದ ಒಟ್ಟು 16 ಪಂದ್ಯಗಳಲ್ಲಿ 633 ರನ್ ಬಾರಿಸಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಫಾಫ್ ಡು ಪ್ಲೆಸಿಸ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಹೀಗಾಗಿ ತಂಡದಿಂದ ಕೈಬಿಟ್ಟಿರುವ ಫಾಫ್ ಡು ಪ್ಲೆಸಿಸ್ ಮೇಲೆ ಹಲವು ತಂಡಗಳ ಕಣ್ಣಿರುವುದು ಮಾತ್ರ ಸುಳ್ಳಲ್ಲ.