ಬೆಂಗಳೂರು: ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್​ ಅಧಿಕಾರಿ ಡಿ.ರೂಪಾ ಕಿಡಿಕಾರಿದ್ದಾರೆ.

ಮೈಸೂರು ಜಿಲ್ಲಾಧಿಕಾರಿ ನಿವಾಸ ಅನಧಿಕೃತ ನವೀಕರಣ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ನಡೆಸಿ ವರದಿ ನೀಡಲು ಕಂದಾಯ ಇಲಾಖೆ ನಿರ್ದೇಶನ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಡಿ.ರೂಪಾ.. ಕೊರೊನಾ ಹಾಗು ಆರ್ಥಿಕ ವ್ಯವಸ್ಥೆಯಿಂದ ಜನರು ಸಂತ್ರಸ್ತರಾಗಿರುವ ಸಂದರ್ಭದಲ್ಲಿ ಜನರ ಹಣ ಅಂದರೆ ಸಾರ್ವಜನಿಕ ಹಣವ ಬಂಗಲೆಯಲ್ಲಿ ಸ್ವಿಮ್ಮಿಂಗ್ ಪೂಲ್ ಕಟ್ಟಲು ಮುಂದಾಗಿದ್ದು ಮೊಟ್ಟ ಮೊದಲನೆಯದಾಗಿ ರೋಹಿಣಿ ಐಎಎಸ್ ಅವರ ನೈತಿಕ ಪತನ ಎದ್ದು ತೋರಿಸುತ್ತದೆ. ಕಟ್ಟಲು ಪರವಾನಗಿ ತೆಗೆದುಕೊಂಡಿಲ್ಲ ಎನ್ನುವುದು ನಂತರದ ವಿಚಾರ. ಕಟ್ಟುವುದನ್ನ ಮುಂದೂಡಲೂಬಹುದಿತ್ತು ಎಂದು ಟ್ವಿಟರ್​ನಲ್ಲಿ ಗುಡುಗಿದ್ದಾರೆ.

ಇದನ್ನೂ ಓದಿ: ವರ್ಗಾವಣೆಯಾದರೂ IAS ಅಧಿಕಾರಿ ರೋಹಿಣಿ ಸಿಂಧೂರಿಗೆ ತಪ್ಪದ ಸಂಕಷ್ಟ

The post ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಕಿಡಿ: ‘ನೈತಿಕ ಪತನ’ ಎಂದ ಐಪಿಎಸ್​ ಅಧಿಕಾರಿ appeared first on News First Kannada.

Source: newsfirstlive.com

Source link