ರೌಡಿ ಶೀಟರ್‌, ಡ್ರಗ್ಸ್ ಪೆಡ್ಲರ್‌ಗಳ ಮನೆ ಮೇಲೆ ಪೊಲೀಸರಿಂದ ದಾಳಿ; ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ವಾರ್ನಿಂಗ್ | Bengaluru western division police raid on rowdy sheeters and drug peddlers residence


ರೌಡಿ ಶೀಟರ್‌, ಡ್ರಗ್ಸ್ ಪೆಡ್ಲರ್‌ಗಳ ಮನೆ ಮೇಲೆ ಪೊಲೀಸರಿಂದ ದಾಳಿ; ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ವಾರ್ನಿಂಗ್

ರೌಡಿ ಶೀಟರ್‌, ಡ್ರಗ್ಸ್ ಪೆಡ್ಲರ್‌ಗಳ ಮನೆ ಮೇಲೆ ಪಶ್ಚಿಮ ವಿಭಾಗದ ಪೊಲೀಸರಿಂದ ದಾಳಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್‌ಗಳು, ಡ್ರಗ್ಸ್ ಪೆಡ್ಲರ್‌ಗಳಿಗೆ ಬೆಂಗಳೂರಿನ ಪಶ್ಚಿಮ ವಿಭಾಗದ ಪೊಲೀಸರು ಶಾಕ್ ಕೊಟ್ಟಿದ್ದಾರೆ. ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ಗಳು, ಡ್ರಗ್ಸ್ ಪೆಡ್ಲರ್‌ಗಳ ಮನೆಗಳ ಮೇಲೆ ಬೆಳಗ್ಗೆ ಐದು ಗಂಟೆಗೆ ಸುಮಾರು 600 ಪೊಲೀಸರು ದಾಳಿ ನಡೆಸಿದ್ದಾರೆ.

ಪಶ್ಚಿಮ ವಿಭಾಗ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ಲಿಯೋ, ಕಾರ್ತಿಕ್, ಹಿದಾಯತ್, ವಾಸಿಂಪಾಷ, ಡಿಕ್ರಿ ಸಲೀಂ, ಆಯೂಬ್ ಖಾನ್, ವಿನೋದ್, ವೆಂಕಟೇಶ್, ವಿಜಯ್, ಸತೀಶ ಸೇರಿದಂತೆ 180ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆದಿದ್ದು ರೌಡಿಶೀಟರ್ಸ್, ಡ್ರಗ್ಸ್ ಪೆಡ್ಲರ್‌ಗಳ ಮನೆಗಳಲ್ಲಿ ಶೋಧಕಾರ್ಯ ನಡೆದಿದೆ. ಬೆಂಗಳೂರಿನ ಕಾಟನ್‌ಪೇಟೆ, ಚಾಮರಾಜಪೇಟೆ ಠಾಣೆ, ಬ್ಯಾಟರಾಯನಪುರ, ಜೆಜೆನಗರ, ಕೆ.ಪಿ.ಅಗ್ರಹಾರ ಠಾಣೆ, ಮಾಗಡಿ ರೋಡ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರಿಂದ ದಾಳಿ ನಡೆದಿದೆ.

ಇನ್ನು ಈ ದಾಳಿ ಬಗ್ಗೆ ಮಾತನಾಡಿದ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್, ಪಶ್ಚಿಮ ವಿಭಾಗದ 600 ಪೊಲೀಸರಿಂದ ಕಾರ್ಯಾಚರಣೆ ನಡೆದಿದೆ. 180 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. 123 ರೌಡಿಗಳು, ಡ್ರಗ್ಸ್ ಪೆಡ್ಲರ್ಸ್ ಠಾಣೆಗೆ ಕರೆತಂದು ವಾರ್ನ್ ಮಾಡಲಾಗಿದೆ. ಸಮನ್ಸ್ ನೀಡಿದ್ದರೂ ತಲೆಮರೆಸಿಕೊಂಡು ಓಡಾಡುತ್ತಿದ್ದರು. ಹೀಗಾಗಿ ಆರೋಪಿಗಳನ್ನು ಠಾಣೆಗೆ ಕರೆತಂದು ವಾರ್ನಿಂಗ್ ಮಾಡಿದ್ದೇವೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ರೌಡಿಗಳು, ಡ್ರಗ್ಸ್ ಪೆಡ್ಲರ್‌ಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಗ್ರಾಮ ವಾಸ್ತವ್ಯದ ಸಭೆಯಲ್ಲಿ ನಾನಿರುವುದೇ ನಿಮಗಾಗಿ ಹಾಡಿದ ಆರೋಗ್ಯ ಸಚಿವ ಸುಧಾಕರ್‌

TV9 Kannada


Leave a Reply

Your email address will not be published. Required fields are marked *