ಬಹುತೇಕ ಉತ್ತರ ಕರ್ನಾಟಕದವರೇ ಸೇರಿ ನಿರ್ಮಿಸಿರುವ ಲಕ್ಷ್ಯ ಚಿತ್ರ ರಿಲೀಸ್ಗೆ ಸಿದ್ದವಾಗಿದೆ.. ಸಿನಿಮಾ ಪತ್ರಕರ್ತ ರವಿ ಸಾಸನೂರ್ ಅವರು ಕಥೆ ಬರೆದು ನಿರ್ದೇಶನ ಮಾಡಿರುವ ಲಕ್ಷ್ಯ ಚಿತ್ರದ ಟ್ರೈಲರನ್ನು ಗೂಗ್ಲಿ ಖ್ಯಾತಿಯ ನಿರ್ದೇಶಕ ಪವನ್ ಒಡೆಯರ್ ಕುಮಾರ್ ಅವರು ಬಿಡುಗಡೆಗೊಳಿಸಿದರು.
ನೈಜ ಘಟನೆಗಳನ್ನು ಆಧರಿಸಿ ಒಂದು ಸೋಷಿಯಲ್ ಕಂಟೆಂಟ್ ಇಟ್ಟುಕೊಂಡು ನಿರ್ಮಾಣವಾದ ಈ ಚಿತ್ರ ಇದೇ 18 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. 2018 ರಿಂದ ಸುದ್ದಿ ಮಾದ್ಯಮದಲ್ಲಿ ಕೆಲಸ ಮಾಡುತ್ತಿದ್ದ ರವಿ 2 ಪುಸ್ತಕಗಳನ್ನು ಸಹ ಬರೆದಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, 18 ವರ್ಷದ ನಂತರ ಪ್ರತಿಯೊಬ್ಬರ ಜೀವನದಲ್ಲೂ ನಡೆಯುವಂತಹ ಘಟನೆಗಳೇ ಈ ಚಿತ್ರದಲ್ಲಿದ್ದು ಎಲ್ಲರಿಗೂ ಚಿತ್ರ ಕನೆಕ್ಟ್ ಆಗುತ್ತದೆ.
ಇನ್ನು ಚಿತ್ರದಲ್ಲಿ ಗೋಕಾಕ್ ಫಾಲ್ಸ್ ಅನ್ನು ವಿಭಿನ್ನವಾಗಿ ತೋರಿಸಿದ್ದೇವೆ. ಬೆಳಗಾವಿ, ಸಾಂಗ್ಲಿ, ಗೋಕಾಕ್ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ, ಕರೆಪ್ಷನ್ ಇಶ್ಯೂ ಇಟ್ಟುಕೊಂಡು ಮಾಡಿದಂಥ ಕಮರ್ಷಿಯಲ್ ಚಿತ್ರವಿದು ಎಂದಿದ್ದಾರೆ.
ಮೂಡಲಮನೆ ಖ್ಯಾತಿಯ ಸಂತೋಷ್ ರಾಜ್ ಜಾವರೆ ಈ ಚಿತ್ರದ ನಾಯಕ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ. ಕಿರುತೆರೆ ಧಾರಾವಾಹಿಗಳಲ್ಲಿ ನಟಿಸಿರುವ ನಿತಿನಾದ್ವಿ ಮತ್ತೊಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ದುಡ್ಡಿನ ಹಿಂದೆ ಬಿದ್ದಿರುವ ವ್ಯಕ್ತಿಯಿಂದ ಇತರರಿಗೆ ಯಾವರೀತಿ ಪರಿಣಾಮ ಬೀರುತ್ತೆ. ಅದು ಆತನಿಗೆ ಹೇಗೆ ಎಫೆಕ್ಟ್ ಆಗುತ್ತೆ ಎಂಬುದನ್ನು ತುಂಬಾ ಪರಿಣಾಮಕಾರಿಯಾಗಿದೆಯಂತೆ.