ಲತಾ ಮಂಗೇಶ್ಕರ್ ಆರೋಗ್ಯ ಮತ್ತೆ ಗಂಭೀರ; ICUನಲ್ಲೇ ಚಿಕಿತ್ಸೆ


ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರ ಆರೋಗ್ಯ ಕ್ಷೀಣಿಸುತ್ತಿದೆ ಅಂತಾ ವೈದ್ಯೆ ಡಾ.ಪ್ರತಿತ್ ಸಮ್ದಾನಿ ತಿಳಿಸಿದ್ದಾರೆ. ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದೀಗ ಆಸ್ಪತ್ರೆಗಳ ಮೂಲಗಳು ತಿಳಿಸಿರುವ ಪ್ರಕಾರ, ಅವರ ಆರೋಗ್ಯ ಮತ್ತಷ್ಟು ಹದಗೆಡುತ್ತಿದೆ. ಮತ್ತೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ವೆಂಟಿಲೇಟರ್​ ಸಹಾಯದಿಂದ ಉಸಿರಾಡುತ್ತಿದ್ದಾರೆ. ಸದ್ಯ ಐಸಿಯುನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ನಿಗಾ ಇಟ್ಟಿದ್ದಾರೆ.
ಡಾ. ಪ್ರತಿತ್ ಸಮ್ದಾನಿ, ಬ್ರೀಚ್ ಕ್ಯಾಂಡಿ ಆಸ್ಪತ್ರೆ

92 ವರ್ಷದ ಲತಾ ಮಂಗೇಶ್ಕರ್​ಗೆ ಜನವರಿ 8 ರಂದು ಕೊರೊನಾ ದೃಢಪಟ್ಟಿತ್ತು. ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಾ. ಪ್ರತಿತ್ ಸಮ್ದಾನಿ ನೇತೃತ್ವದ ವೈದ್ಯರ ತಂಡ ಹಿರಿಯ ಗಾಯಕಿಗೆ ಚಿಕಿತ್ಸೆ ನೀಡುತ್ತಿದೆ.

News First Live Kannada


Leave a Reply

Your email address will not be published.