– ವ್ಯಾಕ್ಸಿನ್ ಪಡೆದ ಮೆಸೇಜ್ ತೋರಿಸಿ ಒಳಗೆ ಬನ್ನಿ

ಭೋಪಾಲ್: ಕೊರೊನಾ ಲಸಿಕೆ ಪಡೆದುಕೊಳ್ಳದವರಿಗೆ ಹೇರ್ ಕಟ್ಟಿಂಗ್ ಮತ್ತು ಶೇವಿಂಗ್ ಮಾಡಬಾರದು ಎಂದು ಮಧ್ಯ ಪ್ರದೇಶದ ಛಿಂದ್ವಾಡಾ ಸಲೂನ್ ಮಾಲೀಕರು ನಿರ್ಧರಿಸಿದ್ದಾರೆ.

ಕೊರೊನಾ ಲಸಿಕೆ ಪಡೆಯದವರಿಗೆ ಕ್ಷೌರ ಸೇರಿದಂತೆ ಯಾವುದೇ ಸೇವೆಗಳನ್ನು ನೀಡಲ್ಲ. ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಅಥವಾ ಮೆಸೇಜ್ ತೋರಿಸಿಯೇ ಸೇವೆ ಪಡೆಯಬೇಕು. ಈ ಮೂಲಕ ಜನರು ವ್ಯಾಕ್ಸಿನ್ ಪಡೆದುಕೊಳ್ಳುವಂತಾಗಲಿ. ಕೊರೊನಾ ಲಸಿಕೆ ಅಭಿಯಾನಕ್ಕೆ ನಾವು ಸಾಥ್ ನೀಡಿದ್ದೇವೆ ಎಂದು ಸಲೂಲ್ ಮಾಲೀಕರ ಸಂಘ ಹೇಳಿದೆ.

ಸಲೂನ್ ಮಾಲೀಕರ ಸಂಘದ ಸಭೆಯಲ್ಲಿ ಸರ್ವಸಮ್ಮತಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕ್ಷೌರ ಮಾಡುವಾವ ಗ್ರಾಹಕರ ಸಮೀಪಕ್ಕೆ ಹೋಗಬೇಕಾಗುತ್ತದೆ . ಮುಂಜಾಗ್ರತ ಕ್ರಮ ತೆಗೆದುಕೊಂಡ್ರೂ ಸೋಂಕು ತಗಲುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಸಲೂನ್ ಸಂಘ ಈ ನಿರ್ಧಾರಕ್ಕೆ ಬಂದಿದೆ. ಇದನ್ನೂ ಓದಿ: ಎರಡು ದಿನದ SSLC ಪರೀಕ್ಷೆ ದಿನಾಂಕ ಪ್ರಕಟ

ಕಷಾಯ ಕುಡಿದ್ರೆ ಟಿಫನ್:
ಗದಗ ಜಿಲ್ಲೆ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದಲ್ಲಿ ಇಡೀ ಊರಿಗೆ ಊರೇ ಕೊರೊನಾ ವಿರುದ್ಧ ಟೊಂಕಕಟ್ಟಿ ನಿಂತಿದೆ. ಹೆಮ್ಮಾರಿ ಕೊರೊನಾ ಹಿಮ್ಮೆಟ್ಟಿಸಲು ಗ್ರಾಮ ಪಂಚಾಯ್ತಿ ಮಾಡಿರೋ ಮಾಸ್ಟರ್ ಪ್ಲಾನ್‍ನಿಂದಾಗಿ ಗ್ರಾಮಸ್ಥರು ಆರೋಗ್ಯವೇ ಭಾಗ್ಯ ಅಂತಿದ್ದಾರೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ಮಾಜಿ ಪ್ರಿಯಕರನ ದುಬಾರಿ ಬೈಕ್‍ಗೆ ಬೆಂಕಿ ಇಟ್ಟ ಮಹಿಳೆ

ಗ್ರಾಮದಲ್ಲಿ ಯಾವುದೇ ಹೋಟೆಲ್‍ಗೆ ಹೋದ್ರೂ ಮೊದಲು ಒಂದು ಲೋಟ ಕಷಾಯ ಕೊಡ್ತಾರೆ. ಆಮೇಲೆ ಊಟ, ತಿಂಡಿ ಏನ್ ಬೇಕು ಅಂತ ಕೇಳ್ತಾರೆ. ಕಷಾಯಕ್ಕೆ ಆಯುರ್ವೇದಲ್ಲಿ ವಿಶೇಷ ಸ್ಥಾನ ಇದೆ. ಗಂಟಲಿನಲ್ಲಿನ ವೈಸರ್ಗಳನ್ನು ಕೊಲ್ಲಬಲ್ಲ, ರೋಗನಿರೋಧಕ ಶಕ್ತಿಯನ್ನ ಹೆಚ್ವಿಸುವಲ್ಲೂ ಕಷಾಯ ಸಹಕಾರಿ. ಹೀಗಾಗಿ ಅಬ್ಬಿಗೇರಿ ಗ್ರಾಮ ಪಂಚಾಯ್ತಿ ಗ್ರಾಮದ ಪ್ರತಿ ಹೋಟೆಲ್‍ಗಳಲ್ಲಿ ಕಷಾಯ ನೀಡುವಂತೆ ಮನವಿ ಮಾಡಿದೆ. ಟೀ ಅಂಗಡಿಗೆ ಹೋದ್ರೂ ಅಲ್ಲೂ ಮೊದಲಿಗೆ ಒಂದು ಕಪ್ ಕಷಾಯ ಕೊಡ್ತಾರೆ. ಹೋಟೆಲ್‍ಗಳಲ್ಲಿ ಒಂದು ವೇಳೆ ಕಷಾಯ ಬೇಡಪ್ಪ ಅಂದ್ರೆ ಎದ್ದು ಮುಂದಕ್ಕೆ ಹೋಗಯ್ಯ ಅಂತಾರೆ. ಇನ್ನು ಎಲ್ಲೇ ಕಷಾಯ ಕುಡಿದ್ರೂ ಹಣ ಪಡೆಯಲ್ಲ.

The post ಲಸಿಕೆ ಪಡೆಯದವರಿಗೆ ಇಲ್ಲ ಹೇರ್ ಕಟ್ಟಿಂಗ್, ಶೇವಿಂಗ್ – ಸಲೂನ್ ಮಾಲೀಕರ ನಿರ್ಧಾರ appeared first on Public TV.

Source: publictv.in

Source link