ಬೆಂಗಳೂರು: ಕೊರೊನಾ ಲಸಿಕೆಯ ಕೊರತೆ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆಯನ್ನೇ ಗೈದಿದ್ದಾರೆ. ಸರಣಿ ಟ್ವೀಟ್​ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ಲಸಿಕೆ ವಿಚಾರದಲ್ಲಿ ಅಪಪ್ರಚಾರ ಏನಿಲ್ಲ. ಲಸಿಕೆ ಇಲ್ಲ ಎಂಬುದು ವಾಸ್ತವ. 18 ವರ್ಷ ಮೀರಿದವರಿಗೆ ಮೇ 1ರಿಂದ ಲಸಿಕೆ ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದರು. ಈಗ ಲಸಿಕೆ ಕೊಡುತ್ತಿಲ್ಲ. ಇದು ಸುಳ್ಳೇ? ಜನರಿಗೆ ಲಸಿಕೆ ಸಿಗುತ್ತಿಲ್ಲ ಎಂದರೆ ಅಪಪ್ರಚಾರ ಹೇಗಾಗುತ್ತೆ? ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ ಎಂದರೆ ಹೇಗೆ?
ಮೇ 1ರಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಅವರು ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಅಭಿಯಾನಕ್ಕೆ ಚಾಲನೆ ನೀಡಿ ಮೂರು ವಾರಗಳಾದರೂ ರಾಜ್ಯಕ್ಕೆ ಲಸಿಕೆ ಬಂದಿಲ್ಲ. ಬಿಜೆಪಿ ರಾಜ್ಯದ ನಾಯಕರು ತಾವು ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡು ಈಗ ಕಾಂಗ್ರೆಸ್ಸಿಗರು ಅಪಪ್ರಚಾರ ಮಾಡುತ್ತಿದ್ದಾರೆ ಎಂದರೆ ಹೇಗೆ?

ಬೇರೆ ದೇಶಗಳಲ್ಲಿ ಅಲ್ಲಿಯ ಅಧ್ಯಕ್ಷರು, ಪ್ರಧಾನಿಗಳೇ ಮೊದಲು ಲಸಿಕೆ ಹಾಕಿಸಿಕೊಂಡರು. ನರೇಂದ್ರ ಮೋದಿ ಅವರು ಯಾಕೆ ವಿಳಂಬ ಮಾಡಿದರು? ಅದಕ್ಕೆ ಅನುಮಾನ ಬಂದು ಯಾರೋ ಕೆಲವರು ಅಪಪ್ರಚಾರ ಮಾಡಿರಬಹುದು. ಈಗ ನಾನು ಲಸಿಕೆ ಹಾಕಿಸಿಕೊಂಡಿಲ್ಲವೇ?

ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಲ್ಲಿ ತಲಾ ಒಂದು ಕೋಟಿ ಕೊಡಿ, ಲಸಿಕೆ ಖರೀದಿ ಮಾಡಿ ಜನರಿಗೆ ಹಂಚುತ್ತೇವೆ ಎಂದರೆ ಅದಕ್ಕೂ ಮುಖ್ಯಮಂತ್ರಿಗಳು ಒಪ್ಪಿಗೆ ಕೊಡುತ್ತಿಲ್ಲ. ಸರ್ಕಾರದ ಹಣದಲ್ಲಿ ಲಸಿಕೆ ವಿತರಣೆ ಮಾಡುವುದರಲ್ಲಿ ತಪ್ಪೇನಿದೆ? ಸರ್ಕಾರ ಮಾಡುವುದೂ ಅದೇ ಕೆಲಸ ಅಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

The post ಲಸಿಕೆ ಬಗ್ಗೆ ಕೆಲವರು ಅಪಪ್ರಾಚಾರ ಮಾಡಿದ್ದನ್ನ ಒಪ್ಪಿಕೊಂಡ ಸಿದ್ದರಾಮಯ್ಯ; ಆದ್ರೆ ಕೊಟ್ಟ ಸ್ಪಷ್ಟನೆ ಏನು? appeared first on News First Kannada.

Source: newsfirstlive.com

Source link