ಶಿವಮೊಗ್ಗ: ಸಾಗರ ತಾಲೂಕಿನ ಕಳಸವಳ್ಳಿ ಬಳಿಯ ಸಿಗಂದೂರು ಲಾಂಚ್​ನಿಂದ ನದಿಗೆ ಹಾರಿದ ಮಹಿಳೆಯನ್ನು ಲಾಂಚ್​ನಲ್ಲಿದ್ದ ವ್ಯಕ್ತಿಗಳು ರಕ್ಷಿಸಿರುವ ಘಟನೆ ಇಂದು ಸಂಜೆ ಸಾಗರದ ಸಿಗಂದೂರು ಬಳಿ ನಡೆದಿದೆ.

ಹಾವೇರಿ ಜಿಲ್ಲೆಯ ಹಿರೇಕೆರೂರು ಮೂಲದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಿಗಂದೂರು ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು ಸಾಗರ ಕಡೆಗೆ ಬರುತ್ತಿದ್ದ ವೇಳೆ ಶರಾವತಿ ನದಿಯ ಹಿನ್ನೀರಿನ ಮಧ್ಯ ಭಾಗದಲ್ಲಿ ಸಿಗಂದೂರು ಲಾಂಚ್​ನಿಂದ ಹಾರಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಲಾಂಚ್​ನಲ್ಲಿದ್ದ ಪ್ರಕಾಶ್, ಸುಧಾಕರ್, ಪ್ರಶಾಂತ್​ ಎಂಬುವರು ತಕ್ಷಣ ಕಾರ್ಯ ಪ್ರವೃತ್ತರಾಗಿ ನದಿಗೆ ಹಾರಿದ್ದ ಮಹಿಳೆಯನ್ನು ರಕ್ಷಿಸಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿರುವ ಮಹಿಳೆಯನ್ನ ಚಿಕಿತ್ಸೆಗಾಗಿ ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ.

The post ಲಾಂಚ್​ನಿಂದ ನದಿಗೆ ಹಾರಿ ಮಹಿಳೆ ಆತ್ಮಹತ್ಯೆಗೆ ಯತ್ನ: ಹರಸಾಹಸ ಪಟ್ಟು ಕೊನೆಗೂ ರಕ್ಷಣೆ appeared first on News First Kannada.

Source: newsfirstlive.com

Source link