ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಅಬ್ಬರದ ಹಿನ್ನೆಲೆ ಸದ್ಯ ಲಾಕ್​ಡೌನ್ ಜಾರಿಯಲ್ಲಿದೆ. ಮೇ 24ರ ನಂತರ ಲಾಕ್​ಡೌನ್ ಮುಂದುವರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಒಂದು ವೇಳೆ ಲಾಕ್​ಡೌನ್ ವಿಸ್ತರಣೆ ಮಾಡಿದ್ರೆ ಆರ್ಥಿಕ ಪ್ಯಾಕೇಜ್ ಘೋಷಣೆಯಾಗುತ್ತಾ ಅನ್ನೋ ನಿರೀಕ್ಷೆ ಇದೆ. ಇದರ ನಡುವೆಯೇ ಸಿಎಂ ಬಿಎಸ್​ ಯಡಿಯೂರಪ್ಪ ಅವರು 13 ಸಚಿವರು ಸೇರಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಆರ್ಥಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅವರೊಂದಿಗೆ ಪ್ರಮುಖ ಸಭೆಯನ್ನು ನಡೆಸಲು ಆಹ್ವಾನ ನೀಡಿದ್ದಾರೆ.

ಸಭೆಯಲ್ಲಿ ಡಿಸಿಎಂಗಳಾದ ಗೋವಿಂದ ಕಾರಜೋಳ, ಡಾ.ಸಿ‌.ಎನ್. ಅಶ್ವತ್ಥ್‌ನಾರಾಯಣ್, ಲಕ್ಷ್ಮಣ್ ಸವದಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಕಂದಾಯ ಸಚಿವ ಆರ್.ಅಶೋಕ್, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‌ಕುಮಾರ್, ವಸತಿ ಸಚಿವ ವಿ.ಸೋಮಣ್ಣ, ಗೃಹ ಹಾಗೂ ಕಾನೂನು ಸಂಸದೀಯ ಸಚಿವ ಬಸವರಾಜ ಬೊಮ್ಮಾಯಿ, ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕನ್ನಡ ಮತ್ತು ಸಂಸ್ಕೃತಿ, ಅರಣ್ಯ ಸಚಿವ, ಅರವಿಂದ ಲಿಂಬಾವಳಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತರು ಸೇರಿದಂತೆ ಹಲವು ಅಧಿಕಾರಿಗಳು ಮಹತ್ವದ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

The post ಲಾಕ್ಡೌನ್ ವಿಸ್ತರಿಸಿದ್ರೆ ಆರ್ಥಿಕ ಪ್ಯಾಕೇಜ್?; 13 ಸಚಿವರು, ಅಧಿಕಾರಿಗಳೊಂದಿಗೆ ನಾಳೆ ಸಿಎಂ ಸಭೆ appeared first on News First Kannada.

Source: newsfirstlive.com

Source link