ಹುಬ್ಬಳ್ಳಿ: ಲಾರಿ ಆಟೋ ಮಧ್ಯೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಹೊರವಲಯದ ಗಬ್ಬೂರು ಬೈಪಾಸ್ ಬಳಿ ನಡೆದಿದೆ.

ಹುಬ್ಬಳ್ಳಿಯಿಂದ ವರೂರಿಗೆ ಆಟೋ ಹೊರಟಿತ್ತು, ಎದುರಿನಿಂದ ಬಂದ ಲಾರಿ ಆಟೋಗೆ ಡಿಕ್ಕಿ ಹೊಡೆದಿದ್ದು ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಸಾವಿಗೀಡಾದ ವ್ಯಕ್ತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ ಸದ್ಯ ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

The post ಲಾರಿ ಆಟೋ ಮಧ್ಯೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ದಾರುಣ ಸಾವು appeared first on News First Kannada.

Source: newsfirstlive.com

Source link