ದಾವಣಗೆರೆ: ಇಂದು ಬೆಳ್ಳಂ‌ ಬೆಳಗ್ಗೆ ಡೀಸೆಲ್ ತುಂಬಿದ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕೂಡಲೇ ಬೆಸ್ಕಾ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.

ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮದಲ್ಲಿ ಘಟನೆ ನಡೆದಿದ್ದು ಅಪಘಾತದಲ್ಲಿ ಚಾಲಕನಿಗೆ ಗಾಯವಾಗಿದೆ. ಚಾಲಕನನ್ನು ಹರಪನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ಇನ್ನು ಲಾರಿಯಿಂದ ಡೀಸೆಲ್ ಸೋರಿಕೆಯಾಗುತ್ತಲೇ ಡಿಸೇಲ್ ತುಂಬಿಕೊಳ್ಳಲು ಜನರು ಬಕೆಟ್ ತೆಗೆದುಕೊಂಡು ಮುಗಿಬಿದ್ದಿದ್ದಾರೆ. ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿ ಶಾಮಕದಳ ಸಿಬ್ಬಂದಿ ಆಗಮಿಸಿ, ಜನರನ್ನು ಚದುರಿಸಿದ್ದಾರೆ.

The post ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಲಾರಿ ಪಲ್ಟಿ.. ಡೀಸೆಲ್ ತುಂಬಿಕೊಳ್ಳಲು ಮುಗಿಬಿದ್ದ ಜನ appeared first on News First Kannada.

Source: newsfirstlive.com

Source link