ವರಮಹಾಲಕ್ಷ್ಮಿ ಹಬ್ಬಕ್ಕೆಂದು ಕಮಲ ಕೀಳುತ್ತಿದ್ದ ವೇಳೆ 70 ವರ್ಷದ ರೈತರೊಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಸಮೀಪದ ಕೋನಘಟ್ಟ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.

ಸಾಂಕೇತಿಕ ಚಿತ್ರ
ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬಕ್ಕೆಂದು ಕಮಲ ಕೀಳುತ್ತಿದ್ದ ವೇಳೆ 70 ವರ್ಷದ ರೈತರೊಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ಸಮೀಪದ ಕೋನಘಟ್ಟ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ಮೃತರನ್ನು ಕೊನಘಟ್ಟ ನಿವಾಸಿ ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಈತ ಕಾಣೆಯಾಗಿರುವುದನ್ನು ಗಮನಿಸಿದ ಕುಟುಂಬಸ್ಥರು ತೀವ್ರ ಹುಡುಕಾಟ ಆರಂಭಿಸಿದ್ದಾರೆ. ಈ ವೇಳೆ ಕೃಷ್ಣಪ್ಪ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಕೆರೆಯಿಂದ ಕಮಲ ತರುವುದಾಗಿ ಹೇಳಿದ ಕೃಷ್ಣಪ್ಪ ಮನೆಯಿಂದ ಹೋಗಿದ್ದರು. ರಾತ್ರಿಯಾದರೂ ಮನೆಗೆ ಬಾರದ್ದನ್ನು ಗಮನಿಸಿದ ಕುಟುಂಬಸ್ಥರು ತೀವ್ರ ಹಡುಕಾಟದಲ್ಲಿ ತೊಡಗಿದ್ದಾರೆ. ಈ ವೇಳೆ ಕರೆಯ ಬಳಿ ಚಪ್ಪಲಿ ಪತ್ತೆಯಾಗಿದ್ದು, ಕೆರೆಯಲ್ಲಿ ಹುಡುಕಾಟ ನಡೆಸಲು ಗ್ರಾಮಸ್ಥರು ಮುಂದಾಗಿದ್ದಾರೆ. ಅದಾಗ್ಯೂ ಕೃಷ್ಣಪ್ಪ ಅವರ ಸುಳಿವು ಸಿಗದೇ ಇದ್ದಾಗ ಘಟನೆ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಕುಟುಂಬಸ್ಥರು ಹೇಳಿದ್ದಾರೆ.
ಕುಟುಂಬಸ್ಥರ ದೂರಿನಂತೆ ಶುಕ್ರವಾರ ಬೆಳಗ್ಗೆ ಪೊಲೀಸರು ಸ್ಥಳೀಯ ಈಜುಗಾರರ ಸಹಾಯದಿಂದ ಕೊರಾಕಲ್ ಬಳಸಿ ಶೋಧ ಕಾರ್ಯ ಆರಂಭಿಸಿದ್ದು, ಮಧ್ಯಾಹ್ನ 12.30ರ ಸುಮಾರಿಗೆ ಕೃಷ್ಣಪ್ಪ ಅವರ ಮೃತದೇಹವನ್ನು ಕರೆಯಿಂದ ಹೊರತೆಗೆಯಲಾಯಿತು. ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹವನ್ನು ಪೊಲೀಸರು ಕುಟುಂಬಕ್ಕೆ ಹಸ್ತಾಂತರಿಸಿದರು. ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.