ವಶಿಷ್ಠ ಬ್ಯಾಂಕ್ ವಂಚನೆ ಕೇಸ್ ಸಿಐಡಿಗೆ ವರ್ಗಾವಣೆ ಸಾಧ್ಯತೆ

ವಶಿಷ್ಠ ಬ್ಯಾಂಕ್ ವಂಚನೆ ಕೇಸ್ ಸಿಐಡಿಗೆ ವರ್ಗಾವಣೆ ಸಾಧ್ಯತೆ

ಬೆಂಗಳೂರು: ವಶಿಷ್ಠ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ವಂಚನೆ ಪ್ರಕರಣವನ್ನು ಸಿಐಡಿ ತನಿಖೆಗೆ ವರ್ಗಾಯಿಸುವ ಸಾಧ್ಯತೆಗಳಿವೆ. ಗ್ರಾಹಕರಿಂದ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ ಆರೋಪ ಎದುರಿಸುತ್ತಿರುವ ಬ್ಯಾಂಕ್​ನ ವಿರುದ್ಧ ಈಗಾಗಲೇ 70ಕ್ಕೂ ಹೆಚ್ಚು ಜನ ದೂರು ನೀಡಿದ್ದಾರೆ.

₹10.92 ಕೋಟಿಗೂ ಅಧಿಕ ಮೊತ್ತದ ಅವ್ಯವಹಾರ ನಡೆದಿದೆ ಎನ್ನಲಾಗಿದ್ದು, ದೊಡ್ಡ ಮೊತ್ತದ ಕೇಸ್​ ಆದ ಕಾರಣ ಪ್ರಕರಣವನ್ನು ಸಿಐಡಿಗೆ ವಹಿಸಲು ಹನುಮಂತ ನಗರ ಠಾಣೆ ಪೊಲೀಸರು ಸಿದ್ಧತೆ ಮಾಡಿಕೊಳ್ತಿದ್ದಾರೆ ಎನ್ನಲಾಗಿದೆ.

ಈಗಾಗಲೇ ಪೊಲೀಸರು ಆರೋಪಿಗಳ‌ ವಿಚಾರಣೆ ನಡೆಸುತ್ತಿದ್ದು, ಬ್ಯಾಂಕ್ ಮುಖ್ಯಸ್ಥ ಹಣ ಹಿಂದಿರುಗಿಸಲು ಕಾಲಾವಕಾಶ ಕೇಳಿದ್ದಾರೆ ಎಂದು ನ್ಯೂಸ್​ಫಸ್ಟ್​ ಗೆ ಮಾಹಿತಿ ಲಭ್ಯವಾಗಿದೆ.

The post ವಶಿಷ್ಠ ಬ್ಯಾಂಕ್ ವಂಚನೆ ಕೇಸ್ ಸಿಐಡಿಗೆ ವರ್ಗಾವಣೆ ಸಾಧ್ಯತೆ appeared first on News First Kannada.

Source: newsfirstlive.com

Source link