ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಸಿಗೋಡಿನಲ್ಲಿರುವ ನವೋದಯ ವಿದ್ಯಾಲಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದೆ. 40 ಮಂದಿಗೆ ಕೊರೊನಾ ಕಾಣಿಸಿಕೊಂಡ ಬೆನ್ನಲ್ಲೇ ಇದೀಗ ಮತ್ತೆ ವಿದ್ಯಾರ್ಥಿಗಳು ಸೇರಿ 30 ಮಂದಿಗೆ ಸೋಂಕು ತಗುಲಿರುವುದು ಖಾತ್ರಿಯಾಗಿದೆ.
ಬಾಳೆಹೊನ್ನುರು ಸಮೀಪದ ಸಿಗೋಡು ಜವಾಹರಲಾಲ್ ನವೋದಯ ವಿದ್ಯಾಲಯದಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆ ವಸತಿ ಶಾಲೆಯ ಸಿಬ್ಬಂದಿ ಸೇರಿ 443 ಜನರ ಸ್ವ್ಯಾಬ್ ಪಡೆಯಲಾಗಿತ್ತು. ಇದರಲ್ಲಿ ಮತ್ತೆ 30 ಮಂದಿಗೆ ಸೋಂಕು ದೃಢಪಟ್ಟಿದ್ದು ಆತಂಕ ಸೃಷ್ಟಿಸಿದೆ. ಆದ್ರೆ ಪತ್ತೆಯಾದ ಎಲ್ಲರಲ್ಲಿಯೂ ರೋಗ ಲಕ್ಷಣಗಳಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯ ಶಾಲೆಯನ್ನು ಸಂಪೂರ್ಣವಾಗಿ ಸೀಲ್ಡೌನ್ ಮಾಡಲಾಗಿದ್ದು ಸೋಂಕಿತರನ್ನು ನವೋದಯ ವಿದ್ಯಾಲಯದಲ್ಲಿಯೇ ಕ್ವಾರಂಟೀನ್ ಮಾಡಲಾಗಿದೆ.