ಸಾಂದರ್ಭಿಕ ಚಿತ್ರ
ದೆಹಲಿ: ದೆಹಲಿಯಲ್ಲಾಗುತ್ತಿರುವ ವಾಯುಮಾಲಿನ್ಯಕ್ಕೆ (Delhi Air Pollution) ಪಾಕಿಸ್ತಾನವೇ ಕಾರಣ ಎಂದು ಉತ್ತರ ಪ್ರದೇಶ (Uttar Pradesh) ಸರ್ಕಾರ ಆರೋಪಿಸಿದ ಬೆನ್ನಲ್ಲೇ ಪಾಕಿಸ್ತಾನದಲ್ಲಿನ (Pakistan) ಕೈಗಾರಿಕೆಗಳನ್ನು ನೀವು ನಿಷೇಧಿಸುತ್ತೀರಾ? ಎಂದು ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ (Supreme Court) ಪ್ರಶ್ನಿಸಿದೆ. ದೆಹಲಿಯ ವಾಯುಮಾಲಿನ್ಯ ಹೆಚ್ಚುವಲ್ಲಿ ಉತ್ತರ ಪ್ರದೇಶದ ಕೈಗಾರಿಕೆಗಳ ಪಾತ್ರವಿಲ್ಲ. ಬದಲಾಗಿ ಪಾಕಿಸ್ತಾನದ ಕಲುಷಿತ ಗಾಳಿಯು ದೆಹಲಿಯ ವಾಯುಮಾಲಿನ್ಯದ ಪರಿಸ್ಥಿತಿಯನ್ನು ಹದಗೆಡಿಸುತ್ತದೆ. ಅಲ್ಲದೆ, ರಾಜ್ಯದಲ್ಲಿ ಕೈಗಾರಿಕೆಗಳ ಸಂಖ್ಯೆಇಳಿಮುಖವಾಗಿದೆ. ಹೀಗಾಗಿ ದೆಹಲಿಗೆ ಉತ್ತರ ಪ್ರದೇಶದಿಂದ ಕಲುಷಿತ ಗಾಳಿ ಬೀಸುವುದಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಿರಿಯ ವಕೀಲ ರಂಜಿತ್ ಕುಮಾರ್ ಶುಕ್ರವಾರ (ಡಿ.3) ವಾದ ಮಂಡಿಸಿದರು.
ಈ ಕುರಿತು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ, ಹಾಗಾದರೆ ಪಾಕಿಸ್ತಾನದಲ್ಲಿರುವ ಕೈಗಾರಿಕೆಗಳನ್ನು ಮುಚ್ಚಿಸುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಉತ್ತರಿಸಿದ ಯುಪಿ ಪರ ವಕೀಲರು, ಕೈಗಾರಿಕೆಗಳನ್ನು ಮುಚ್ಚುವುದರಿಂದ ರಾಜ್ಯದಲ್ಲಿ ಕಬ್ಬು ಮತ್ತು ಹಾಲಿನ ಉದ್ಯಮಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದಿದ್ದಾರೆ. ಕಳೆದ ಕೆಲವು ದಿನಗಳಿಂದ ದೆಹಲಿಯಲ್ಲಿ ಉಂಟಾಗುತ್ತಿರುವ ವಾಯುಮಾಲಿನ್ಯದ ಕುರಿತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸ್ವತಃ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿ, ಎಲ್ಲಾ ರಾಜ್ಯಗಳ ಅಭಿಪ್ರಾಯವನ್ನು ಕೇಳಿತ್ತು. ಈ ಹಿನ್ನೆಲೆಯಲ್ಲಿ ಇಂದು ಉತ್ತರ ಪ್ರದೇಶ ಸರ್ಕಾರದ ಪರ ಹಿರಿಯ ವಕೀಲ ರಂಜಿತ್ ಕುಮಾರ್ ವಾದ ಮಂಡಿಸಿದರು. ಈ ಕುರಿತು ಸುಪ್ರೀಂ ಕೋರ್ಟ್, ಈ ಬಗ್ಗೆ ಹೆಚ್ಚಿನ ಕ್ರಮಕ್ಕೆ ವಾಯುಗುಣಮಟ್ಟ ನಿರ್ಧರಿಸುವ ಆಯೋಗದ ಮೊರೆ ಹೋಗುವಂತೆ ಸೂಚಿಸಿದ್ದಾರೆ. ಜತೆಗೆ ನ್ಯಾಯಾಲಯುವು ವಾಯುಮಾಲಿನ್ಯ ತಡೆಗಟ್ಟಲು ಸೂಕ್ತ ಕ್ರಮಕೈಗೊಳ್ಳಲು ಸಮಯವನ್ನು ಕೇಳಿದೆ.
ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಜರುಗಿಸುವಂತೆ ನ್ಯಾಯಾಲಯ 24 ಗಂಟೆಗಳ ಗಡುವನ್ನು ನೀಡಿತ್ತು. ಇದರೊಂದಿಗೆ ವಾಯುಗುಣಮಟ್ಟ ನಿರ್ವಹಣೆಯ ಆಯೋಗವು ಕಾರ್ಯಪಡೆಯನ್ನು ರಚಿಸಿತ್ತು. ಇದೀಗ ಕಳೆದ 24ಗಂಟೆಗಳಲ್ಲಿ ತೆಗೆದುಕೊಂಡ ಕ್ರಮಗಳನ್ನು ಆಲಿಸಿದ ನ್ಯಾಯಾಲಯ ನಗರದಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆ ಒದಗಿಸುವ ನಿಟ್ಟಿನಲ್ಲಿ ಕಟ್ಟಲಾಗುತ್ತಿರುವ 19 ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಮುಂದುವರೆಸಲು ಅವಕಾಶ ನೀಡಿದೆ. ಈ ಮೂಲಕ ಮುಂದಿನ ವಿಚಾರಣೆಯನ್ನು ಡ.10ಕ್ಕೆ ಮುಂದೂಡಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ 365ಕ್ಕೆಇಳಿದಿದ್ದು, ಅಪಾಯಕಾರಿ ಹಂತವನ್ನುದೆಹಲಿಯ ಗಾಳಿಯ ಗುಣಮಟ್ಟ ತಲುಪುತ್ತಿದೆ ಎಂದು ತಜ್ಱರು ತಿಳಿಸಿದ್ದಾರೆ.