ವಾಯ್ಸ್ ಆಫ್ ನೀಡ್ ಫೌಂಡೇಶನ್ ವತಿಯಿಂದ ದಿವ್ಯಾಂಗರಿಗೆ ಕೋವಿಡ್ ಲಸಿಕೆ ಅಭಿಯಾನ

ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ದಾಸನಪುರದಲ್ಲಿ, ವಾಯ್ಸ್ ಆಫ್ ನೀಡ್ ಫೌಂಡೇಶನ್ ವತಿಯಿಂದ ದಿವ್ಯಾಂಗರಿಗೆ ಕೋವಿಡ್ ಲಸಿಕೆ ಹಾಗೂ ದಿನಸಿ ಪದಾರ್ಥಗಳ ಕಿಟ್ ಗಳನ್ನು ವಿತರಿಸಲಾಯಿತು.

ಲಸಿಕೆ ಮತ್ತು ದಿನಸಿ ಪದಾರ್ಥಗಳ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಯಲಹಂಕ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಹನುಮಯ್ಯ ಚಾಲನೆ ನೀಡಿದರು. ಇದುವರೆಗೂ ದಾಸನಪುರ ಹೋಬಳಿಯಲ್ಲಿ 700 ರಿಂದ 800 ದಿವ್ಯಾಂಗರಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಈ ಸಂಸ್ಥೆಯ ಉದ್ದೇಶ ದಾಸನಪುರ ಹೋಬಳಿಯ ಎಲ್ಲಾ ದಿವ್ಯಾಂಗರಿಗೆ ಸಂಸ್ಥೆಯಿಂದ ಉಚಿತ ಕೋವಿಡ್ ಲಸಿಕೆಯನ್ನು ನೀಡಬೇಕೆಂದಿದೆ ಅದಕ್ಕಾಗಿ ಲಸಿಕಾ ಅಭಿಯಾನ ಆರಂಭಿಸಿ ಜನರ ಸೇವೆಗೆ ಮುಂದಾಗಿದೆ. ಇದನ್ನೂ ಓದಿ: 45 ವರ್ಷ ಮೇಲ್ಪಟ್ಟ 6 ಲಕ್ಷಕ್ಕೂ ಹೆಚ್ಚು ಮಂದಿಗೆ ವ್ಯಾಕ್ಸಿನೇಷನ್ – ಬೆಂಗಳೂರು ವರದಿ ಬಿಡುಗಡೆ

ದಾಸನಪುರದಲ್ಲಿ ಈಗಾಗಲೇ ದಿವ್ಯಾಂಗರಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಈ ಸಾರ್ಥಕ ಕಾರ್ಯಕ್ಕೆ ವಾಯ್ಸ್ ಆಫ್ ನೀಡ್ ಫೌಂಡೇಶನ್‍ಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ವೇಳೆ ಅರುಣ್, ಹನುಮಯ್ಯ, ಬಾಲು, ವಸಂತ್, ಕೇಶವ್ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

The post ವಾಯ್ಸ್ ಆಫ್ ನೀಡ್ ಫೌಂಡೇಶನ್ ವತಿಯಿಂದ ದಿವ್ಯಾಂಗರಿಗೆ ಕೋವಿಡ್ ಲಸಿಕೆ ಅಭಿಯಾನ appeared first on Public TV.

Source: publictv.in

Source link