ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚಿದೆ. ಈ ಹಿನ್ನಲೆ ಪಾಸಿಟಿವಿಟಿ ರೇಟ್ ತಗ್ಗಿಸುವ ಸಲುವಾಗಿ ಮತ್ತೊಂದು ವಾರ ಲಾಕ್‍ಡೌನ್ ವಿಸ್ತರಿಸಲಾಗಿದೆ.

ಜೂನ್ 14 ರಿಂದ 16 ರವರೆಗೆ ಹಾಫ್ ಲಾಕ್‍ಡೌನ್ ವ್ಯವಸ್ಥೆಯಿದೆ. ಈ ವೇಳೆ ತರಕಾರಿ, ದಿನಸಿ ಖರೀದಿಗೆ ಮೂರು ದಿನ ಅವಕಾಶ ಕಲ್ಪಿಸಿದೆ. ಅದರಲ್ಲೂ ಸಮಯ ನಿಗದಿಗೊಳಿಸಲಾಗಿದೆ. ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ವ್ಯಾಪಾರಕ್ಕೆ, ಖರೀದಿಗೆ ಅವಕಾಶ ಕಲ್ಪಿಸಿಕೊಟ್ಟಿದೆ. ಇದನ್ನೂ ಓದಿ: ರಾತ್ರೋರಾತ್ರಿ ಕೊರೊನಾ ದೇವಿ ದೇವಸ್ಥಾನ ನಿರ್ಮಾಣ, ಬೆಳಗ್ಗೆ ನೆಲಸಮ

ಇನ್ನೂಂದು ವಾರದಲ್ಲಿ ನಾಲ್ಕು ದಿನ ಕಂಪ್ಲೀಟ್ ಲಾಕ್ ಮಾಡಲು ಚಾಮರಾಜನಗರ ಡಿಸಿ ಎಂಆರ್ ರವಿ ಆದೇಶ ಮಾಡಿದ್ದಾರೆ. ಜೂನ್ 17 ರಿಂದ 20 ರವರೆಗೆ ಕಂಪ್ಲೀಟ್ ಲಾಕ್‍ಡೌನ್‍ಗೆ ಆದೇಶಿಸಲಾಗಿದೆ. ಗುರುವಾರ, ಶುಕ್ರವಾರ, ಶನಿವಾರ, ಭಾನುವಾರ ಯಾರೂ ಕೂಡ ಅನಗತ್ಯ ಸಂಚಾರ ಮಾಡದಂತೆ ಬ್ರೇಕ್ ಹಾಕಿದ್ದಾರೆ. ಒಂದು ವೇಳೆ ನಿಯಮ ಉಲ್ಲಂಘಿಸಿ ಯಾರಾದರೂ ರಸ್ತೆಗಿಳಿದರೆ ಅಂತಹವರ ವಾಹನ ಸೀಜ್ ಮಾಡಲಾಗುತ್ತದೆ. ಇದನ್ನೂ ಓದಿ: ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ವಾರ ಕಂಪ್ಲೀಟ್ ಲಾಕ್‍ಡೌನ್ ವಿಸ್ತರಣೆ

ಲಾಕ್‍ಡೌನ್ ವೇಳೆ ಆಸ್ಪತ್ರೆ, ಮೆಡಿಕಲ್, ಹಾಲು, ಹಣ್ಣು, ಕೃಷಿ ಚಟುವಟಿಕೆ ನಡೆಸಲು ಅನುಮತಿ ಕೊಡಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮದ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿ ಜಿಲ್ಲಾಡಳಿತದಿಂದ ಆದೇಶ ಹೊರಡಿಸಲಾಗಿದೆ.

The post ವಾರದಲ್ಲಿ ನಾಲ್ಕು ದಿನ ಕಂಪ್ಲೀಟ್ ಲಾಕ್- ಚಾಮರಾಜನಗರದಲ್ಲಿ ಮತ್ತೆ ಒಂದು ವಾರ ಲಾಕ್‍ಡೌನ್ ವಿಸ್ತರಣೆ appeared first on Public TV.

Source: publictv.in

Source link