ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ವಾಹನ ಮಾಲಿಕರಿಗೆ ರಾಜ್ಯ ಸರ್ಕಾರ ಗುಡ್​ ನ್ಯೂಸ್ ನೀಡಿದ್ದು, ಜೂನ್ ತಿಂಗಳದ ಪ್ರಯಾಣಿಕ ವಾಹನ ತೆರಿಗೆಯಲ್ಲಿ ಶೇಕಡಾ 50 ರಷ್ಟು ವಿನಾಯ್ತಿ ನೀಡಿದೆ.

ಈ ಬಗ್ಗೆ ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಅವರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ಎಲ್ಲಾ ಪ್ರಯಾಣಿಕ ವಾಹನಗಳಿಗೆ 50% ತೆರಿಗೆ ವಿನಾಯ್ತಿ ನೀಡಲಾಗಿದೆ. ಕೋವಿಡ್-19 ರ 2ನೇ ಅಲೆಯ ಹಿನ್ನೆಲೆಯಲ್ಲಿ ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿರುವುದರಿಂದ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಲಾಗಿದೆ.

ಅದರಂತೆ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 16(1) ರನ್ವಯ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಜೂನ್ 2021ರ ವರೆಗೆ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯಲ್ಲಿ ವಿನಾಯತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

The post ವಾಹನ ಮಾಲಿಕರಿಗೆ ಸಿಹಿ ಸುದ್ದಿ.. ‘ಪ್ರಯಾಣಿಕ ವಾಹನ ತೆರಿಗೆ’ಯಲ್ಲಿ ವಿನಾಯಿತಿ appeared first on News First Kannada.

Source: newsfirstlive.com

Source link