‘ವಿಕ್ರಮ್​’ ವಿಲನ್ ಸೂರ್ಯಗೆ ರೋಲೆಕ್ಸ್ ವಾಚ್ ಗಿಫ್ಟ್ ಕೊಟ್ಟ ಕಮಲ್ ಹಾಸನ್​; ಇದರ ಬೆಲೆ ಎಷ್ಟು ಲಕ್ಷ? ಗೆಸ್ ಮಾಡಿ | Kamal Haasan Gifted 40 lakh rs Rolex watch to Vikram Villain Suriya


‘ವಿಕ್ರಮ್​’ ವಿಲನ್ ಸೂರ್ಯಗೆ ರೋಲೆಕ್ಸ್ ವಾಚ್ ಗಿಫ್ಟ್ ಕೊಟ್ಟ ಕಮಲ್ ಹಾಸನ್​; ಇದರ ಬೆಲೆ ಎಷ್ಟು ಲಕ್ಷ? ಗೆಸ್ ಮಾಡಿ

ಸೂರ್ಯ-ಕಮಲ್

‘ವಿಕ್ರಮ್’ ಸಿನಿಮಾ ನಿರ್ಮಾಣ ಮಾಡಿದ್ದು ಕಮಲ್​ ಹಾಸನ್ ಅವರು. ರಾಜ್ ಕಮಲ್ ಫಿಲ್ಮ್ಸ್ ಇಂಟರ್​ನ್ಯಾಷನಲ್ ಮೂಲಕ ಸಿನಿಮಾ ನಿರ್ಮಾಣ ಆಗಿದೆ. ಈ ಚಿತ್ರದಿಂದ ಅವರಿಗೆ ದುಡ್ಡಿನ ಮಳೆ ಸುರಿದಿದೆ.

ಕಮಲ್ ಹಾಸನ್  (Kamal Haasan) ನಟನೆಯ ‘ವಿಕ್ರಮ್​’ ಸಿನಿಮಾ (Vikram Movie) ದೊಡ್ಡ ಮಟ್ಟದ ಗೆಲುವು ಕಂಡಿದೆ. ಈ ಸಿನಿಮಾ ಮೂಲಕ ಕಮಲ್ ಹಾಸನ್ ಸೂಪರ್ ಕಂಬ್ಯಾಕ್ ಮಾಡಿದ್ದಾರೆ. ‘ವಿಕ್ರಮ್​’ ಸಿನಿಮಾದಲ್ಲಿ ಸೂರ್ಯ ಅವರು ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರದ ಹೆಸರು ರೋಲೆಕ್ಸ್​. ಅಚ್ಚರಿ ಎಂದರೆ ಈಗ ಕಮಲ್ ಹಾಸನ್ ಅವರು ದುಬಾರಿ ಬೆಲೆಯ ರೋಲೆಕ್ಸ್ ವಾಚ್​​ಅನ್ನು ಅವರಿಗೆ ಗಿಫ್ಟ್ ಮಾಡಿದ್ದಾರೆ. ಇದರ ಬೆಲೆ ಕೇಳಿ ಅಭಿಮಾನಿಗಳು ನಿಜಕ್ಕೂ ಅಚ್ಚರಿ ಹೊರಹಾಕುತ್ತಿದ್ದಾರೆ.

‘ವಿಕ್ರಮ್’ ಸಿನಿಮಾ ನಿರ್ಮಾಣ ಮಾಡಿದ್ದು ಕಮಲ್​ ಹಾಸನ್ ಅವರು. ರಾಜ್ ಕಮಲ್ ಫಿಲ್ಮ್ಸ್ ಇಂಟರ್​ನ್ಯಾಷನಲ್ ಮೂಲಕ ಸಿನಿಮಾ ನಿರ್ಮಾಣ ಆಗಿದೆ. ಈ ಚಿತ್ರದಿಂದ ಅವರಿಗೆ ದುಡ್ಡಿನ ಮಳೆ ಸುರಿದಿದೆ. ಇದು ಕಮಲ್ ಹಾಸನ್ ಖುಷಿಯನ್ನು ಹೆಚ್ಚಿಸಿದೆ. ಹೀಗಾಗಿ, ಚಿತ್ರದ ಯಶಸ್ಸಿಗೆ ಕಾರಣರಾದವರಿಗೆ ಧನ್ಯವಾದ ಹೇಳುತ್ತಿದ್ದಾರೆ.

ಜೂನ್​ 7ರಂದು ಕಮಲ್ ಹಾಸನ್ ಅವರು ನಿರ್ದೇಶಕ ಲೋಕೇಶ್ ಕನಗರಾಜ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ 70 ಲಕ್ಷ ರೂಪಾಯಿ ಮೌಲ್ಯದ ಲೆಕ್ಸಸ್ ಕಾರನ್ನು ಉಡುಗೊರೆಯಾಗಿ ನೀಡಿದ್ದರು. ಸಿನಿಮಾದಲ್ಲಿ ರೋಲೆಕ್ಸ್ ಹೆಸರಿನ ವಿಲನ್ ಪಾತ್ರ ಮಾಡಿರುವ ಸೂರ್ಯ ಅವರನ್ನು ಈಗ ಕಮಲ್ ಭೇಟಿ ಮಾಡಿದ್ದಾರೆ. ಅವರಿಗೆ 39.66 ಲಕ್ಷ ರೂಪಾಯಿ ಮೌಲ್ಯದ ರೋಲೆಕ್ಸ್ ವಾಚ್ ಉಡುಗೊರೆ ನೀಡಿದ್ದಾರೆ. ಈ ಫೋಟೋಗಳನ್ನು ಸೂರ್ಯ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಕರ್ನಾಟಕದಲ್ಲಿ ಹೊಸ ದಾಖಲೆ

ತಮಿಳು ಹಾಗೂ ತೆಲುಗು ಸಿನಿಮಾಗಳಿಗೆ ಕರ್ನಾಟಕದಲ್ಲಿ ದೊಡ್ಡ ಮಾರುಕಟ್ಟೆ ಇದೆ ಎಂಬುದು ಈ ಮೊದಲೇ ಸಾಬೀತಾಗಿದೆ. ‘ವಿಕ್ರಮ್​’ ಸಿನಿಮಾದಲ್ಲಿ ಈ ಟ್ರೆಂಡ್ ಮುಂದುವರಿದಿದೆ. ಬೆಂಗಳೂರು ಸೇರಿ ಕರ್ನಾಟಕದ ಅನೇಕ ಕಡೆಗಳಲ್ಲಿ ‘ವಿಕ್ರಮ್’ ಸಿನಿಮಾ ಒಳ್ಳೆಯ ರೀತಿಯಲ್ಲಿ ಪ್ರದರ್ಶನ ಕಾಣುತ್ತಿದೆ. ಈ ವರ್ಷ ಕರ್ನಾಟಕದ ಬಾಕ್ಸ್ ಆಫೀಸ್​ನಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ತಮಿಳು ಸಿನಿಮಾ ಎನ್ನುವ ಖ್ಯಾತಿ ‘ವಿಕ್ರಮ್’ಗೆ ಸಿಕ್ಕಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

TV9 Kannada


Leave a Reply

Your email address will not be published.