ಬೆಂಗಳೂರು: ಪೇಜಾವರ ಶ್ರೀಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ವಿವಾದ ಸೃಷ್ಟಿಸಿರುವ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಈ ಬಗ್ಗೆ ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ಮಾತನಾಡಿ, ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಂಸಲೇಖಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದೇವೆ ಅಂತಾ ತಿಳಿಸಿದ್ದಾರೆ.
ಇದನ್ನೂ ಓದಿ: ಪೇಜಾವರ ಶ್ರೀಗಳ ಕುರಿತ ಹೇಳಿಕೆ: ಹಂಸಲೇಖ ವಿರುದ್ಧ ಕಮಿಷನರ್ಗೆ ದೂರು
ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ವಿಪ್ರ ಯುವ ವೇದಿಕೆ ಮೂಲಕ ಅಖಿಲ ಭಾರತ ಬ್ರಾಹ್ಮಣ ಸಮಾಜದ ಉಪಾಧ್ಯಕ್ಷ ಕೃಷ್ಣ ಅವರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ. ವಿದ್ಯಾಪೀಠ ಸರ್ಕಲ್ ಬಳಿ ಇರುವ ಶ್ರೀಗಳ ಬೃಂದಾವನದ ಮುಂದೆ ಬಂದು ಹಂಸಲೇಖ ಕ್ಷಮೆ ಕೇಳಬೇಕು. ಬಹಿರಂಗ ಹೇಳಿಕೆ ನೀಡಿ ನಾಲ್ಕು ಗೋಡೆ ಮುಂದೆ ಕ್ಷಮೆ ಕೇಳೋದಲ್ಲ. ಬೃಂದಾವನದ ಮುಂದೆಯೇ ಕ್ಷಮೆ ಕೇಳಬೇಕು. ಎಲ್ಲಿ ಅಪಮಾನ ಆಗಿದ್ಯೋ ಅಲ್ಲಿಯೇ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಹಂಸಲೇಖ ವಿರುದ್ಧ ದೂರು ನೀಡಿದ್ದ ವ್ಯಕ್ತಿ ವಿರುದ್ಧವೇ ದೂರು ದಾಖಲು
The post ವಿಚಾರಣೆಗೆ ಬರುವಂತೆ ಹಂಸಲೇಖಗೆ ನೋಟಿಸ್ ಕೊಟ್ಟ ಪೊಲೀಸರು appeared first on News First Kannada.