ದಾವಣಗೆರೆ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಗೊಂದಲಗಳ ನಡುವೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾತನಾಡಿದ ಅವರು, ವಿಜಯಪುರ ಶಾಸಕರೊಬ್ಬರು ಕೆಲ ಎಂಎಲ್‍ಎಗಳಿಗೆ ಫೋನ್ ಮಾಡಿ, ನಾನೇ ಮುಂದಿನ ಸಿಎಂ ನನಗೆ ಬೆಂಬಲ ನೀಡಿ ಎಂದಿದ್ದಾರೆ. ಹೈಕಮಾಂಡ್ ನಿಂದ ಸ್ಪಷ್ಟ ಸೂಚನೆ ಬಂದಿದ್ದರೂ, ಈ ರೀತಿ ಮಾತನಾಡುತ್ತಾರೆ. ಕೆಲವರು ಸಿಎಂ ಆಗಬೇಕು ಅಂತ ಈಗಾಗಲೇ ಸೂಟೂಬೂಟು ಹೊಲೆಸಿದ್ದಾರೆ ಎಂದು ಶಾಸಕ ಬಸವನಗೌಡ ಯತ್ನಾಳ್ ಹಾಗೂ ಅರವಿಂದ್ ಬೆಲ್ಲದ ಬಗ್ಗೆ ಪರೋಕ್ಷವಾಗಿ ವ್ಯಂಗ್ಯವಾಡಿದರು.

ಅರುಣ್ ಸಿಂಗ್ ಅವರಿಗೆ ಇಂದು ಕರೆ ಮಾಡಿದ್ದೆ, ಸಂಜೆ 4-30ಕ್ಕೆ ಭೇಟಿಯಾಗಲು ಬನ್ನಿ ಎಂದಿದ್ದರು. ಆದರೆ ನಾನು ಕೋವಿಡ್ ಕೇರ್ ಸೆಂಟರ್ ನಲ್ಲರುವುದರಿಂದ ಭೇಟಿಯಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಇದೇ ತಿಂಗಳು 17ಕ್ಕೆ ಸಮಯ ನೀಡಿದ್ದಾರೆ. ಕೆಲವರು ಅರುಣ್ ಸಿಂಗ್ ರಾಜ್ಯಕ್ಕೆ ಬಂದರೂ ದೆಹಲಿಗೆ ಹೋಗಿರುವುದಾಗಿ ತಿಳಿಸಿದರು. ಇದನ್ನೂ ಓದಿ: ದಿಗ್ವಿಜಯ್ ಸಿಂಗ್, ಸಿದ್ದರಾಮಯ್ಯ, ಜಮೀರ್ ಪಾಕಿಸ್ತಾನದ ಪರ ಇರುವ ಕಾಂಗ್ರೆಸ್ಸಿಗರು: ಈಶ್ವರಪ್ಪ

ಯಡಿಯೂರಪ್ಪನವರು ರಾಜ್ಯದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಆದರೆ ರಾಷ್ಟ್ರೀಯ ನಾಯಕರು ಹೇಳಿದ ಮೇಲು ಬಹಿರಂಗವಾಗಿ ಭಿನ್ನಮತ ನಡೆಸುತ್ತಾರೆ. ಯಾರೇ ತಪ್ಪು ಮಾಡಿದರೂ ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ರೇಣುಕಾಚಾರ್ಯ ಕೋವಿಡ್ ಕಾರ್ಯಕ್ಕೆ ದುಬೈ ಕನ್ನಡಿಗರು ಫಿದಾ- ಮೆಚ್ಚುಗೆಯ ಮಹಾಪೂರ

The post ವಿಜಯಪುರದ ಶಾಸಕ ಫೋನ್ ಮಾಡಿ ನಾನೇ ಮುಖ್ಯಮಂತ್ರಿ ಅಂದ್ರು: ರೇಣುಕಾಚಾರ್ಯ appeared first on Public TV.

Source: publictv.in

Source link