ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ‘ಗೀತ ಗೋವಿಂದಂ’ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು. ಇಬ್ಬರ ಕೆಮಿಸ್ಟ್ರಿ ಸಖತ್ ಕೆಲಸ ಮಾಡಿತ್ತು.

ವಿಜಯ್ ದೇವರಕೊಂಡ
ವಿಜಯ್ ದೇವರಕೊಂಡ (Vijay Devarakonda) ಹಾಗೂ ರಶ್ಮಿಕಾ ಮಂದಣ್ಣ (Rashmika Mandanna) ಅವರು ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಬಗ್ಗೆ ಹಲವು ವರದಿಗಳು ಹರಿದಾಡಿದ್ದವು. ಆದರೆ, ಈ ವಿಚಾರವನ್ನು ಯಾರೊಬ್ಬರೂ ಅಧಿಕೃತ ಮಾಡಿಲ್ಲ. ಮುಂಬೈನ ಹಲವು ಕಡೆಗಳಲ್ಲಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ. ಇಬ್ಬರೂ ಹಲವು ಕಡೆಗಳಲ್ಲಿ ಸುತ್ತಾಟ ನಡೆಸಿದ್ದಾರೆ. ಈ ಕಾರಣಕ್ಕೆ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಈಗ ಇವರ ರಿಲೇಶನ್ಶಿಪ್ ಬಗ್ಗೆ ಹೊಸ ಅಪ್ಡೇಟ್ ಕೇಳಿ ಬಂದಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಅಚ್ಚರಿ ಹೊರ ಹಾಕಿದ್ದಾರೆ.
ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ‘ಗೀತ ಗೋವಿಂದಂ’ ಹಾಗೂ ‘ಡಿಯರ್ ಕಾಮ್ರೇಡ್’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ‘ಗೀತ ಗೋವಿಂದಂ’ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು. ಇಬ್ಬರ ಕೆಮಿಸ್ಟ್ರಿ ಸಖತ್ ಕೆಲಸ ಮಾಡಿತ್ತು. ಆ ಸಂದರ್ಭದಲ್ಲಿ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಆದರೆ, ಯಾರೊಬ್ಬರೂ ಈ ವಿಚಾರವನ್ನು ಒಪ್ಪಿಕೊಂಡಿಲ್ಲ. ಇಬ್ಬರೂ ಬೆಸ್ಟ್ ಫ್ರೆಂಡ್ಸ್ ಎಂದೇ ಹೇಳಿಕೊಂಡರು.
ಈಗ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ರಿಲೇಶನ್ಶಿಪ್ ಬಗ್ಗೆ ಹೊಸ ಅಪ್ಡೇಟ್ ಸಿಕ್ಕಿದೆ. ಇಬ್ಬರೂ ಬೇರೆ ಆಗಿ ಎರಡು ವರ್ಷಗಳೇ ಕಳೆದಿವೆ ಎಂದು ಇಟೈಮ್ಸ್ ವರದಿ ಮಾಡಿದೆ. ಇವರ ಸಂಬಂಧ ಮುರಿದು ಬಿದ್ದರೂ ಇಬ್ಬರೂ ಫ್ರೆಂಡ್ಸ್ ಆಗಿ ಮುಂದುವರಿದಿದ್ದಾರೆ. ಒಬ್ಬರ ವೃತ್ತಿಜೀವನಕ್ಕೆ ಮತ್ತೊಬ್ಬರು ಬೆಂಬಲ ನೀಡುತ್ತಾ ಸಾಗುತ್ತಿದ್ದಾರೆ.