ಬೆಂಗಳೂರು: ಕೇಂದ್ರ ಸರ್ಕಾರದ ಆದೇಶದಂತೆ ಇಂದಿನಿಂದ ರಾಜ್ಯದಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟ ಜನರಿಗೆ ಕೊರೊನಾ ಲಸಿಕೆ ವಿತರಣೆ ಆರಂಭ ಮಾಡಲಾಗಿದೆ. ಕೋವಿಡ್​ ವಿರುದ್ಧದ ಸಮರದಲ್ಲಿ ಇಂದು ಮಹತ್ವದ ದಿನ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿಂದ ಮೂರನೇ ಹಂತದ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ, ಲಸಿಕಾ ಅಭಿಯಾನ ಆರಂಭ ಮಾಡಲು ಕೇಂದ್ರ ಸರ್ಕಾರ 3 ಲಕ್ಷ ಡೋಸ್​ ಲಸಿಕೆಗಳನ್ನು ನೀಡಿದೆ. ನಮ್ಮ ಬಳಿಯೂ 1 ಲಕ್ಷ ಡೋಸ್​​ಗಳು ಲಭ್ಯವಿದೆ. ಇದಲ್ಲದೇ ರಾಜ್ಯ ಸರ್ಕಾರ 2 ಕೋಟಿ ಲಸಿಕೆಗಳನ್ನು ಪಡೆಯಲು ಅರ್ಡರ್​ ನೀಡಿದ್ದೇವೆ ಎಂದರು. ಈಗಾಗಲೇ 45 ವರ್ಷ ಮೇಲ್ಪಟ್ಟವರಿಗೆ ನೀಡುತ್ತಿರುವ ಲಸಿಕೆ ಅಭಿಯಾನ ಮುಂದುವರಿಯುತ್ತದೆ. ಇದರಿಂದ ಅದಕ್ಕೆ ಯಾವುದೇ ಸಮಸ್ಯೆ ಆಗಲ್ಲ ಎಂದು ಹೇಳಿದ್ರು.

ರಾಜ್ಯದಲ್ಲಿ ಇಂದು ಆರಂಭವಾಗುತ್ತಿರುವ ಅಭಿಯಾನದಲ್ಲಿ ರಾಜ್ಯದ 3.26 ಕೋಟಿ ಜನರಿಗೆ ಲಸಿಕೆ ನೀಡುವ ಉದ್ದೇಶವನ್ನು ಹೊಂದಿದ್ದೇನೆ. ಸ್ವದೇಶಿ ನಿರ್ಮಿತ ಎರಡು ಲಸಿಕೆ ಹಾಗೂ ವಿದೇಶದಿಂದ ಒಂದು ಲಸಿಕೆ ಲಭ್ಯವಾಗುತ್ತಿದೆ. ಇದರಿಂದ ಜನಸಂಖ್ಯೆಯ ದೊಡ್ಡ ಭಾಗಕ್ಕೆ ಲಸಿಕೆ ಲಭ್ಯವಾಗಲಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲು 100 ರೂಪಾಯಿ ಸೇವಾ ಶುಲ್ಕ ನೀಡಬೇಕು. ಆದಕ್ಕಿಂತ ಹೆಚ್ಚಿನ ಹಣ ಪಡೆದರೇ ಅಂತಹ ಆಸ್ಪತ್ರೆಯ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು. ಮುಂದಿನ ದಿನಗಳಲ್ಲಿ ಲಸಿಕೆ ಲಭ್ಯತೆ ಅನ್ವಯ ಅಭಿಯಾನವನ್ನು ವಿಸ್ತರಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ಭಾರತ ಸರ್ಕಾರ ಕ್ರಮ ಕೈಗೊಂಡಿರೋದು ಸಮಯೋಚಿತವಾಗಿದ್ದು, ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹೊರ ದೇಶದಿಂದ ಲಸಿಕೆ ಬರುತ್ತಿದೆ. ಶೀಘ್ರವಾಗಿ ಎಲ್ಲವೂ ಸರಿಹೋಗಲಿದೆ. ಇನ್ನೆರಡು ದಿನದಲ್ಲಿ ಎಲ್ಲರ ಅನುಮಾನಕ್ಕೆ ತೆರೆ ಬೀಳಲಿದೆ. ಮೋದಿಯವರು ಸಹಕಾರ ನೀಡ್ತಿದ್ದಾರೆ. ಇಂದಿನಿಂದ ನಮ್ಮಲ್ಲಿ ಖಾಲಿಯಾಗೋವರೆಗೂ ಲಸಿಕೆ ನೀಡುತ್ತೇವೆ ಎಂದರು.

ಇನ್ನು ಕಾಳ ಸಂತೆಯಲ್ಲಿ ಔಷಧಿ ಮಾರಾಟ ಮಾಡಿದರೆ ತೀವ್ರ ಕ್ರಮಕೈಗೊಳ್ಳುತ್ತೇವೆ. ಅಂತಹ ಯಾವುದೇ ಪ್ರಕರಣ ಇದ್ದರೂ ನಮ್ಮ ಗಮನಕ್ಕೆ ತನ್ನಿ, ನಾವು ಕ್ರಮ ಕೈಗೊಳ್ಳುತ್ತೇವೆ. ಈ ಬಗ್ಗೆ ಸಂಜೆ ಆಸ್ಪತ್ರೆಯ ಪ್ರಮುಖ ತಜ್ಞರ ಜೊತೆ ಸಭೆ ನಡೆಯಲಿದ್ದು, ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ರು.

ನ್ಯೂಸ್​ಫಸ್ಟ್​ ಕಳಕಳಿ
ಕೊರೊನಾದಿಂದ ರಕ್ಷಿಸಿಕೊಳ್ಳಲು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ. ಮಾಸ್ಕ್ ಧರಿಸಿ, ಸೋಶಿಯಲ್ ಡಿಸ್ಟನ್ಸ್ ಕಾಪಾಡಿ. ಕೈ ತೊಳೆಯುತ್ತಿರಿ. ಮತ್ತು ಮೇ 1 ರಿಂದ 18ರ ಮೇಲ್ಪಟ್ಟ ಎಲ್ಲರೂ ವ್ಯಾಕ್ಸಿನ್ ಪಡೆಯಲು ಅರ್ಹರಾಗಿದ್ದು ರೆಜಿಸ್ಟರ್ ಮಾಡಿಕೊಳ್ಳಬಹುದಾಗಿದೆ. ಅದಕ್ಕಾಗಿ https://www.cowin.gov.in/  ಇಲ್ಲಿಗೆ ಭೇಟಿ ಕೊಟ್ಟು ನೊಂದಣಿ ಮಾಡಿಕೊಳ್ಳಿ. ಮತ್ತೊಂದು ಮುಖ್ಯ ಸಂಗತಿ ಗಮನಿಸಿ CoWin ಆ್ಯಪ್ ಸಾರ್ವಜನಿಕರಿಗೆ ಅಲ್ಲ. ಹೀಗಾಗಿ ಕಡ್ಡಾಯವಾಗಿ ವೆಬ್​ಸೈಟ್​ನಲ್ಲಿಯೇ ನೊಂದಾಯಿಸಿಕೊಳ್ಳಬೇಕು.

The post ವಿದೇಶದ ಲಸಿಕೆಯೂ ಬರಲಿದೆ, ರಾಜ್ಯದ 3.26 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ- ಸಿಎಂ appeared first on News First Kannada.

Source: newsfirstlive.com

Source link