ಧಾರವಾಡದ: ನಗರದ ಬಸ್ ನಿಲ್ದಾಣದಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿ ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಬ್ಬರ ಮೇಲೆ ದಾಳಿ ಮಾಡಿ ಹಿಗ್ಗಾಮುಗ್ಗಾ ಥಳಿಸುವ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದ ವಿಡಿಯೋ ಶನಿವಾರ ಬೆಳಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ಕಾಲೇಜು ಸಮವಸ್ತ್ರ ಧರಿಸಿರೋ ವಿದ್ಯಾರ್ಥಿಗಳು ಗುಂಪು ಗುಂಪಾಗಿ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡುತ್ತಿರೋದನ್ನು ಕಾಣಬಹುದಾಗಿದೆ. ಇನ್ನು ಗಲಾಟೆ ಕುರಿತಂತೆ ಮಾಹಿತಿ ತಿಳಿದು ಶಹರ ಪೊಲೀಸರು ಸ್ಥಳಕ್ಕಾಗಮಿಸುತ್ತಿದ್ದಂತೆ ವಿದ್ಯಾರ್ಥಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ಕಬ್ಬಿಣದ ರಾಡ್ನಿಂದ್ ಬಡಿದಾಡಿಕೊಂಡ 9ನೇ ತರಗತಿ ವಿದ್ಯಾರ್ಥಿಗಳು